ಕಡೆಗೋಳಿ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು, ಸಹಸವಾರ ಗಂಭೀರ - Karavali Times ಕಡೆಗೋಳಿ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು, ಸಹಸವಾರ ಗಂಭೀರ - Karavali Times

728x90

27 May 2026

ಕಡೆಗೋಳಿ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು, ಸಹಸವಾರ ಗಂಭೀರ

ಬಂಟ್ವಾಳ, ಮೇ 27, 2026 (ಕರಾವಳಿ ಟೈಮ್ಸ್) :  ಫರಂಗಿಪೇಟೆ ಸಮೀಪದ ಕಡೆಗೋಳಿ ಎಂಬಲ್ಲಿ ಬುಧವಾರ ಮುಂಜಾನೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. 

ಮೃತ ಬೈಕ್ ಸವಾರನನ್ನು ಬಜ್ಪೆ ಸಮೀಪದ ಕೈಕಂಬ ನಿವಾಸಿ ಅಭಿಜಿತ್ (28) ಹಾಗೂ ಗಾಯಗೊಂಡ ಸಹಸವಾರನನ್ನು ಸಂದೀಪ್ ಎಂದು ಹೆಸರಿಸಲಾಗಿದೆ. ಅಭಿಜಿತ್ ಅವರು ಸ್ನೇಹಿತ ಸಂದೀಪ್ ಅವರನ್ನು ಬೈಕಿನಲ್ಲಿ ಬಂಟ್ವಾಳ ಅಮ್ಟಾಡಿ ಮನೆಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ, ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಫರಂಗಿಪೇಟೆ ಸಮೀಪದ ಕಡೆಗೋಳಿ ಎಂಬಲ್ಲಿ ಅಪರಿಚಿತ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಪಲ್ಟಿಯಾಗಿ ಬಿದ್ದಿದ್ದು ಅಭಿಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಮೃತ ಅಭಿಜಿತ್ ಅವರಿಗೆ ಮಂಗಳೂರಿನ ಎಂ ಆರ್ ಪಿ ಎಲ್ ಸಂಸ್ಥೆಯಲ್ಲಿ ಉದ್ಯೋಗ ಮಂಜೂರಾತಿಯಾಗಿದ್ದು, ಬುಧವಾರವೇ (ಮೇ 27) ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ವಿಧಿಯಾಟ ಬೇರೆಯೇ ಆಗಿದ್ದು, ಅಭಿಜಿತ್ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಡೆಗೋಳಿ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು, ಸಹಸವಾರ ಗಂಭೀರ Rating: 5 Reviewed By: karavali Times
Scroll to Top