ಬಂಟ್ವಾಳ, ಮೇ 11, 2026 (ಕರಾವಳಿ ಟೈಮ್ಸ್) : ಕಲ್ಲಡ್ಕ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕೊಠಡಿಗಳ ನಿರ್ಮಾಣಕ್ಕಾಗಿ ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಅವರ ವಿಶೇಷ ಶಿಫಾರಸ್ಸಿನ ಮೇರೆಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂ ಆರ್ ಪಿ ಎಲ್) ಸಂಸ್ಥೆಯು ಸಿ ಎಸ್ ಆರ್ ಫಂಡಿನಿಂದ ಒದಗಿಸಿದ 48 ಲಕ್ಷ ರೂಪಾಯಿಗಳ ಹಣಕಾಸು ನೆರವಿನ ಸಹಕಾರದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಡಾ ಮಂಜನಾಥ ಭಂಡಾರಿ ಅವರು ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ ಶಾಲೆಯನ್ನು ಪ್ರೌಢಶಾಲೆಯಾಗಿ ಮೇಲ್ದರ್ಜೆಗೇರಿಸಲು ಹಾಗೂ ಕೆಪಿಎಸ್ ಶಾಲೆಯಾಗಿ ಆಯ್ಕೆಯಾಗಲು ಸಹಕಾರ ನೀಡಿದ ಡಾ ಮಂಜುನಾಥ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಆರ್ ಪೂಜಾರಿ, ತಾ ಪಂ ಮಾಜಿ ಅಧ್ಯಕ್ಷ ಕೆ ಪದ್ಮನಾಭ ರೈ ಕಲ್ಲಡ್ಕ, ಕೊಳ್ನಾಡು ಪಂಚಾಯತ್ ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ತಾ ಪಂ ಮಾಜಿ ಸದಸ್ಯೆ ಐಡಾ ಸುರೇಶ್, ಪ್ರಮುಖರಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ, ನಾಗೇಶ್ ಕಲ್ಲಡ್ಕ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಶ್ರೀಮತಿ ಚಂದನ್ ಜೈನ್, ಸದಸ್ಯರಾದ ಸುರೇಶ್, ಫೌಝಿಯಾ ಮೊದಲಾದವರು ಭಾಗವಹಿಸಿದ್ದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮಧುಸೂಧನ್ ಐತಾಳ್ ಸ್ವಾಗತಿಸಿ, ಮುಖ್ಯ ಶಿಕ್ಷಕ ಅಬೂಬಕ್ಕರ್ ಅಶ್ರಫ್ ಪ್ರಸ್ತಾವನೆಗೈದರು.















0 comments:
Post a Comment