ಬಂಟ್ವಾಳ, ಮೇ 16, 2026 (ಕರಾವಳಿ ಟೈಮ್ಸ್) : ಮೂಡನಡುಗೋಡು ಗ್ರಾಮದ ಪಿಲಿಂಗಾಲು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕ ಜೂಜಾಟದ ಸ್ಥಳಕ್ಕೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಮೇ 13 ರಂದ ಮಧ್ಯಾಹ್ನ ವೇಳೆ ನಡೆದಿದೆ.
ಪೊಲೀಸರ ದಾಳಿ ವೇಳೆ 8 ಮಂದಿ ಸಿಕ್ಕಿ ಬಿದ್ದಿದ್ದು, ಉಳಿದವರು ಪರಾರಿಯಾಗಿದ್ದಾರೆ. ಬಂಧಿತರಿಂದ 2,210/- ರೂಪಾಯಿ ನಗದು ಹಾಗೂ ಸ್ಥಳದಲ್ಲಿದ್ದ 8 ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment