ಸಚಿವ ಡಿ. ಸುಧಾಕರ್ ನಿಧನಕ್ಕೆ ಖಾದರ್, ರಮಾನಾಥ ರೈ, ಗಫೂರ್ ಸಂತಾಪ - Karavali Times ಸಚಿವ ಡಿ. ಸುಧಾಕರ್ ನಿಧನಕ್ಕೆ ಖಾದರ್, ರಮಾನಾಥ ರೈ, ಗಫೂರ್ ಸಂತಾಪ - Karavali Times

728x90

10 May 2026

ಸಚಿವ ಡಿ. ಸುಧಾಕರ್ ನಿಧನಕ್ಕೆ ಖಾದರ್, ರಮಾನಾಥ ರೈ, ಗಫೂರ್ ಸಂತಾಪ

ಮಂಗಳೂರು, ಮೇ 10, 2026 (ಕರಾವಳಿ ಟೈಮ್ಸ್) : ಸಚಿವ ಡಿ ಸುಧಾಕರ್ ನಿಧನಕ್ಕೆ ರಾಜ್ಯ ವಿಧಾನಸಭಾ ಸ್ಪೀಕರ್ ಡಾ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ ಹಾಗೂ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಕರ್ನಾಟಕ ವಿಧಾನಸಭೆಯ ಹಿರಿಯ ಸದಸ್ಯರು ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ ಸುಧಾಕರ್ ಡಿ. ಅವರ ನಿಧನದ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಸುಧಾಕರ್ ಡಿ. ಅವರು 4 ಬಾರಿ ವಿಧಾನಸಭಾ ಸದಸ್ಯರಾಗಿ, ಸಮಾಜ ಕಲ್ಯಾಣ ಸಚಿವರಾಗಿ ಹಾಗೂ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಶ್ರೀಯುತರು ಸರಳ ವ್ಯಕ್ತಿತ್ವ ಮತ್ತು ಜನಪರ ಕಾರ್ಯಗಳಿಂದ ಅವರು ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ಅವರ ಅಗಲಿಕೆ ರಾಜ್ಯಕ್ಕೆ ಮತ್ತು ಹಿರಿಯೂರು ಕ್ಷೇತ್ರದ ಜನತೆಗೆ ತುಂಬಲಾರದ ನಷ್ಟವಾಗಿದೆ.  ಅವರ ಅಗಲಿಕೆಯ ದುಃಖವನ್ನು ಭರಿಸುವ ಸರ್ವ ಶಕ್ತಿಯನ್ನು ಅವರ ಕುಟುಂಬದವರಿಗೆ, ಬಂಧುಗಳಿಗೆ ಮತ್ತು ರಾಜ್ಯದ ಜನತೆಗೆ ದೇವರು ನೀಡಲಿ ಹಾಗೂ ಅಗಲಿದ ಆತ್ಮಕ್ಕೆ ಚಿರ ಶಾಂತಿ ದೊರಕಲಿ ಎಂದು ಸ್ಪೀಕರ್ ಡಾ ಯು ಟಿ ಖಾದರ್ ತಿಳಿಸಿದ್ದಾರೆ. 

ಸಚಿವ ಡಿ ಸುಧಾಕರ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಾಜಿ ಸಚಿವ ಬಿ ರಮಾನಾಥ ರೈ ಅವರು ಜನ ಸಾಮಾನ್ಯರಿಗೆ ಸದಾ ನೆರವಿನ ಹಸ್ತವಾಗಿ ‘ಬಡವರ ಬಂಧು’ ಎಂದೇ ಖ್ಯಾತಿ ಪಡೆದಿದ್ದ ಸಚಿವ ಡಿ ಸುಧಾಕರ್ ಅವರ ನಿಧನದ ಸುದ್ದಿ ಬೇಸರ ತಂದಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ. 

ಅಧಿಕಾರ ಇರಲಿ, ಇಲ್ಲದಿರಲಿ ಜನರ ಸೇವೆಗೆ ಹೆಸರುವಾಸಿಯಾಗಿದ್ದ ಸುಧಾಕರ್ ಅವರು ಅಗಲಿರುವುದು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾ£ಗಳು ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದವರು ತಮ್ಮ ಸಂತಾಪ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನ ಸಾಮಾನ್ಯರಿಗೆ ಸದಾ ನೆರವಿನ ಹಸ್ತವಾಗಿ ‘ಬಡವರ ಬಂಧು’ ಎಂದೇ ಖ್ಯಾತಿ ಪಡೆದಿದ್ದ ಸಚಿವ ಡಿ. ಸುಧಾಕರ್ ಅವರು ನಿಧನದ ಸುದ್ದಿ ಬೇಸರ ತಂದಿದೆ ಎಂದವರು ತಮ್ಮ ಸಂತಾಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್ ಅವರು ಸಚಿವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದು, 

ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ  ಮತ್ತು ಸಾಂಖ್ಯಿಕ ಇಲಾಖಾ ಸಚಿವರಾಗಿದ್ದ ಮಾನ್ಯ ಶ್ರೀ ಸುಧಾಕರ್ ಅವರ ಅಗಲಿಕೆಯ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ನಿಧನದಿಂದ ರಾಜ್ಯವು ಒಬ್ಬ ಜನಪರ, ದಕ್ಷ ಹಾಗೂ ಅಭಿವೃದ್ಧಿ ಪರ ನಾಯಕನನ್ನು ಕಳೆದುಕೊಂಡಿದೆ. ದಿವಂಗತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸಚಿವ ಡಿ. ಸುಧಾಕರ್ ನಿಧನಕ್ಕೆ ಖಾದರ್, ರಮಾನಾಥ ರೈ, ಗಫೂರ್ ಸಂತಾಪ Rating: 5 Reviewed By: karavali Times
Scroll to Top