ಬಂಟ್ವಾಳ, ಮೇ 30, 2026 (ಕರಾವಳಿ ಟೈಮ್ಸ್) : ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ವರಾಂಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಿಯಂಗಳ ಗ್ರಾಮದ ಗುಂಡಿಕುಮೇರು ಎಂಬಲ್ಲಿ ಮೇ 28 ರಂದು ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ ನಿವಾಸಿ ಜಗದೀಶ್ ಪೂಜಾರಿ (58) ಎಂದು ಹೆಸರಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






















0 comments:
Post a Comment