ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ 18ನೇ ಬೋಳಿಯಾರು ಶಾಖೆ ಮೇ 17 ರಂದು ಉದ್ಘಾಟನೆ - Karavali Times ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ 18ನೇ ಬೋಳಿಯಾರು ಶಾಖೆ ಮೇ 17 ರಂದು ಉದ್ಘಾಟನೆ - Karavali Times

728x90

14 May 2026

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ 18ನೇ ಬೋಳಿಯಾರು ಶಾಖೆ ಮೇ 17 ರಂದು ಉದ್ಘಾಟನೆ

ಬಂಟ್ವಾಳ, ಮೇ 14, 2026 (ಕರಾವಳಿ ಟೈಮ್ಸ್) : ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ನೂತನ 18ನೇ ಬೋಳಿಯಾರು ಶಾಖೆಯ ಉದ್ಘಾಟನಾ ಸಮಾರಂಭವು ಮೇ 17 ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಬೋಳಿಯಾರಿನ ಶ್ರೀ ದೇವಿಕಿರಣ್ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು. 

ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಸಂಜೆ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ದೀಪಪ್ರಜ್ವಲನೆ ಹಾಗೂ ಆಶೀರ್ವಚನಗೈಯುವರು. ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸುವರು. ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸುವರು. ಸ್ಪೀಕರ್ ಯು ಟಿ ಖಾದರ್ ಫರೀದ್ ಅವರು ಭದ್ರತಾ ಕೊಠಡಿ ಉದ್ಘಾಟಿಸುವರು. ಶಾಸಕ ಯು ರಾಜೇಶ್ ನಾಯಕ್ ಅವರು ಸೇಫ್ ಲಾಕರ್ ಉದ್ಘಾಟಿಸುವರು. ಮಾಜಿ ಸಚಿವ ಬಿ ರಮಾನಾಥ ರೈ ಕಂಪ್ಯೂಟರ್ ಉದ್ಘಾಟಿಸುವರು. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶ್ರೀಮತಿ ತ್ರಿವೇಣಿ ರಾವ್ ಕೆ ಅವರು ಠೇವಣಿ ಪತ್ರ ಬಿಡುಗಡೆಗೊಳಿಸುವರು. ರಾಜರಾಮ ಭಟ್, ಸಂತೋಷ್ ಕುಮಾರ್ ರೈ ಬೋಳಿಯಾರು ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸುವರು ಎಂದವರು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ಜನಾರ್ದನ ಬೊಂಡಾಲ, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ, ಪ್ರಭಾರ ಶಾಖಾ ವ್ಯವಸ್ಥಾಪಕ ಹರೀಶ್, ಆಡಳಿತ ಮಂಡಳಿ ಸದಸ್ಯರುಗಳಾದ ರಮೇಶ್ ಸಾಲ್ಯಾನ್, ಸುರೇಶ್ ಕುಲಾಲ್ ಎನ್, ಅರುಣ್ ಕುಮಾರ್ ಕೆ, ಸತೀಶ್, ಬಿ ರಮೇಶ್ ಸಾಲ್ಯಾನ್, ಭೋಜ ಸಾಲ್ಯಾನ್, ಕಿರಣ್ ಕುಮಾರ್ ಎ, ಹರೀಶ್, ಪ್ರೇಮನಾಥ ಬಂಟ್ವಾಳ, ಶ್ರೀಮತಿ ವಿದ್ಯಾ, ಶ್ರೀಮತಿ ಮಾಲತಿ ಮಚ್ಚೇಂದ್ರ, ಜಗನ್ನಿವಾಸ ಗೌಡ, ಗಣೇಶ್ ಸಮಗಾರ, ಶ್ರೀಮತಿ ರೇಖಾ ನಾಯಕ್ ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ 18ನೇ ಬೋಳಿಯಾರು ಶಾಖೆ ಮೇ 17 ರಂದು ಉದ್ಘಾಟನೆ Rating: 5 Reviewed By: karavali Times
Scroll to Top