ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಸುಳ್ಯ ಪೊಲೀಸರ ದಾಳಿ : 1.20 ಲಕ್ಷ ಮೌಲ್ಯದ ಮರಳು ವಶಕ್ಕೆ - Karavali Times ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಸುಳ್ಯ ಪೊಲೀಸರ ದಾಳಿ : 1.20 ಲಕ್ಷ ಮೌಲ್ಯದ ಮರಳು ವಶಕ್ಕೆ - Karavali Times

728x90

9 May 2026

ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಸುಳ್ಯ ಪೊಲೀಸರ ದಾಳಿ : 1.20 ಲಕ್ಷ ಮೌಲ್ಯದ ಮರಳು ವಶಕ್ಕೆ

ಸುಳ್ಯ, ಮೇ 09, 2026 (ಕರಾವಳಿ ಟೈಮ್ಸ್) : ಅಕ್ರಮ ಮರಳು ದಂಧೆ ಬೇಧಿಸಿದ ಸುಳ್ಯ ಪೊಲೀಸರು 60 ಟನ್ ಮರಳು ವಶಪಡಿಸಿಕೊಂಡು ಇಬ್ಬರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಮೇ 5 ರಂದು ಬೆಳಿಗ್ಗೆ ತೋಡಿಕಾನ ಗ್ರಾಮದ ಶೆಟ್ಟಿಯಡ್ಕ ಎಂಬಲ್ಲಿ, ಆರೋಪಿಗಳಾದ ಮನು ಪೆರ್ಮುಡ ಹಾಗೂ ಚೆಂಬು ಗ್ರಾಮದ ಆಂಟನಿ ಎಂಬವರು ಕಳ್ಳತನದಿಂದ ಕಾನೂನು ಬಾಹಿರವಾಗಿ ನದಿಯಿಂದ ಮರಳನ್ನು ಕದ್ದು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸುಳ್ಯ ಪೊಲೀಸ್ ಠಾಣಾ ಪಿಎಸ್ಸೈ ಸಂತೋಷ್ ಬಿ ಪಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಈ ದಾಳಿ ನಡೆಸಿದ್ದಾರೆ. 

ದಾಳಿ ವೇಳೆ ಸ್ಥಳದಲ್ಲಿ ಸುಮಾರು 50-60 ಮೆಟ್ರಿಕ್ ಟನ್ ತೂಕದ ಸುಮಾರು 20 ಟಿಪ್ಪರ್ ಲೋಡ್ ಮರಳು ಸಂಗ್ರಹವಾಗಿರುವುದು ಕಂಡು ಬಂದಿದೆ. ಯಾವುದೇ ಪರವಾನಗಿ ಪಡೆಯದೇ, ಕಾನೂನು ಬಾಹಿರವಾಗಿ ಆರೋಪಿ ಮನು ಪೆರ್ಮುಡನು ಆಂಟನಿ ಎಂಬಾತನೊಂದಿಗೆ ಸೇರಿಕೊಂಡು ಮರಳನ್ನು ಕಳ್ಳತನದಿಂದ ಸಂಗ್ರಹ ಮಾಡಿ, ಬಳಿಕ ಲಾರಿಗಳಿಗೆ ಲೋಡ್ ಮಾಡಿ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ. 

ಪೊಲೀಸರು ವಶಪಡಿಸಿಕೊಂಡಿರುವ ಮರಳಿನ ಮೌಲ್ಯ ಸುಮಾರು 1.20 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ದ ಸುಳ್ಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಸುಳ್ಯ ಪೊಲೀಸರ ದಾಳಿ : 1.20 ಲಕ್ಷ ಮೌಲ್ಯದ ಮರಳು ವಶಕ್ಕೆ Rating: 5 Reviewed By: karavali Times
Scroll to Top