ಬಂಟ್ವಾಳ, ಮೇ 07, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ತಲಪಾಡಿ ಬದ್ರಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ನಝೀರ್ ಟಿ ಎಂ (57) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ತಲಪಾಡಿ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರಿ, ಇಬ್ಬರು ಪುತ್ರರು, ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ದಫನ ಕಾರ್ಯವು ಗುರುವಾರ ತಲಪಾಡಿಯ ಮೊಫತ್ಲಾಲ್ ವಠಾರದ ದಫನ ಭೂಮಿಯಲ್ಲಿ ನೆರವೇರಿತು.











0 comments:
Post a Comment