ಗೇರುಕಟ್ಟೆ : ಹೋರಿ ತಿವಿದ ಗಾಯಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತ್ಯು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಿಕರಿಂದ ದೂರು - Karavali Times ಗೇರುಕಟ್ಟೆ : ಹೋರಿ ತಿವಿದ ಗಾಯಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತ್ಯು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಿಕರಿಂದ ದೂರು - Karavali Times

728x90

20 May 2026

ಗೇರುಕಟ್ಟೆ : ಹೋರಿ ತಿವಿದ ಗಾಯಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತ್ಯು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಿಕರಿಂದ ದೂರು

ಬೆಳ್ತಂಗಡಿ, ಮೇ 21, 2026 (ಕರಾವಳಿ ಟೈಮ್ಸ್) : ಹೋರಿ ಹಾಯ್ದು ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಮೃತ ಯುವಕನ ಮನೆ ಮಂದಿ ಆರೋಪಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮೃತ ಯುವಕನನ್ನು ಗೇರುಕಟ್ಟೆ ನಿವಾಸಿ ಸೂಫಿ ಬ್ಯಾರಿ ಎಂಬವರ ಪುತ್ರ ಮುಹಮ್ಮದ್ ಶರೀಫ್ ಪಿ (35) ಎಂದು ಹೆಸರಿಸಲಾಗಿದೆ. ಈ ಬಗ್ಗೆ ಮೃತರ ಸಹೋದರ ನಾಸಿರುದ್ದೀನ್ ಪಿ. ಅವರು ಪೊಲೀಸರಿಗೆ ದೂರು ನೀಡಿದ್ದು, ಮೇ 14 ರಂದು  ರಾತ್ರಿ ಇವರ ಸಹೋದರ ಮಹಮ್ಮದ್ ಶರೀಫ್ ಪಿ ಎಂಬವರಿಗೆ, ಮನೆಯಲ್ಲಿದ್ದ ಹೋರಿ ಹಾಯ್ದು ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಗಾಯಾಳು ಮಹಮ್ಮದ್ ಶರೀಫ್ ಅವರ ಅರೋಗ್ಯ ಪರಿಸ್ಥಿತಿ ಹದಗೆಟ್ಟಿದೆ. ಅವರನ್ನು ಮೇ 16 ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೇ 20 ರಂದು ಮೃತಪಟ್ಟಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ವೈದ್ಯರ ನಿರ್ಲಕ್ಷ್ಯದ ಆರೋಪಗಳನ್ನು ಪರಿಶೀಲಿಸಿ ವರದಿ ನೀಡುವ ಸಲುವಾಗಿ, ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಪತ್ರವ್ಯವಹಾರ ನಡೆಸಲಾಗಿದ್ದು, ವರದಿ ಬಂದ ಬಳಿಕ  ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಗೇರುಕಟ್ಟೆ : ಹೋರಿ ತಿವಿದ ಗಾಯಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತ್ಯು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಿಕರಿಂದ ದೂರು Rating: 5 Reviewed By: karavali Times
Scroll to Top