ಮಂಗಳೂರು, ಮೇ 08, 2026 (ಕರಾವಳಿ ಟೈಮ್ಸ್) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ಪತ್ರಕರ್ತರ ಪ್ರವಾಸದ ಅನುಕೂಲಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೆಯಾದ ಹೊಸ ಪತ್ರಿಕಾ ವಾಹನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮೇ 8 ರಂದು ನಗರದ ಸುಲ್ತಾನ್ ಬತ್ತೇರಿಯಲ್ಲಿ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.











0 comments:
Post a Comment