ಮಂಗಳೂರು, ಮೇ 08, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೆÇಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ ಎನ್ ಬಿ ಡಬ್ಲ್ಯು ವಾರಂಟ್ ಗಳನ್ನು ತಪ್ಪಿಸಿಕೊಂಡು 2018 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಉಪ್ಪಳ-ಪೈವಳಿಕೆ ನಿವಾಸಿ ಅಬ್ದುಲ್ಲಾ ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್ ಅಲಿಯಾಸ್ ಕಾಪ್ರಿ ಸಿದ್ದೀಕ್ ಎಂದು ಹೆಸರಿಸಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೆÇಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಠಾಣಾ ಸಂಬಂಧಿ ಒಟ್ಟು 3 ಎನ್ ಬಿ ಡಬ್ಲ್ಯು ವಾರಂಟ್‍ಗಳು ಬಾಕಿ ಇವೆ. ಆರೋಪಿ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ನಗರದಲ್ಲಿ ತಲೆಮರೆಸಿಕೊಂಡಿರುವ ವಾರಂಟು ಆಸಾಮಿಗಳ ಪತ್ತೆಯ ಬಗ್ಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಯ ಚಲನವಲನಗಳ ಕುರಿತು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ ಪಿಎಸ್ಸೈ ಸಿದ್ದಪ್ಪ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉಳ್ಳಾಲ ಪೆÇಲೀಸ್ ಠಾಣೆಗೆ ಹಸ್ತಾಂತರಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.










0 comments:
Post a Comment