ಮಂಗಳೂರು, ಮೇ 27, 2026 (ಕರಾವಳಿ ಟೈಮ್ಸ್) : ಕಳೆದ 2 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿಶೀಟರ್ ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮಾವಿನಕಟ್ಟೆ, ಅಜಿಲಮೊಗರು ನಿವಾಸಿ ಮೊಹಮ್ಮದ್ ಅಹ್ಮದ್ ಕುಂಞÂ ಎಂಬವರ ಪುತ್ರ ಮೊಹಮ್ಮದ್ ಅಶ್ರಫ್ ಅಲಿಯಾಸ್ ಅಜ್ಜು ಅಲಿಯಾಸ್ ನಿಜಾಮ್ ಅಲಿಯಾಸ್ ಅಡ್ಡು ಅಲಿಯಾಸ್ ಸಮೀರ್ ಎಂದು ಹೆಸರಿಸಲಾಗಿದೆ. ಆರೋಪಿಯು ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯ “ಬಿ” ರೌಡಿ ಶೀಟರ್ ಆಗಿದ್ದು, ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯ 4 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು.
ಆರೋಪಿಯ ವಿರುದ್ದ ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 232/2017 ಪ್ರಕರಣದಲ್ಲಿಯೂ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ಹಾಗೂ ಸುರತ್ಕಲ್ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 63/2025 ಕಲಂ 303(2) ಭಾರತೀಯ ನ್ಯಾಯ ಸಂಹಿತೆ-2023 ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ.
2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೇ 26 ರಂದು ಮಂಗಳೂರು ದಕ್ಷಿಣ ಪೆÇಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.






















0 comments:
Post a Comment