ಬಂಟ್ವಾಳ, ಮೇ 09, 2026 (ಕರಾವಳಿ ಟೈಮ್ಸ್) : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‍ನ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಆಲಡ್ಕದ ಎಸ್ ಎಸ್ ಆಡಿಟೋರಿಯಂನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು ಎಚ್ ತಿಳಿಸಿದರು.
ಮೇ 9 ರಂದು ಬಿ ಸಿ ರೋಡಿನಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಮೇ 12 ರಂದು ಬೆಳಿಗ್ಗೆ 9.30ಕ್ಕೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲಾ ಬಳಿಯಿಂದ ಸಮ್ಮೇಳನ ಸಭಾಂಗಣದ ತನಕ ಸಮ್ಮೇಳನಾಧ್ಯಕ್ಷ ಹಿರಿಯ ಕವಿ, ಗಾಯಕ ರಹೀಂ ಬಿ ಸಿ ರೋಡು ಅವರ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಸಲಹೆಗಾರ ಹಾಜಿ ಪಿ ಮುಹಮ್ಮದ್ ರಫೀಕ್ ಉದ್ಘಾಟಿಸಲಿದ್ದು, 10 ಗಂಟೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು ಎಚ್ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕರ್ನಾಟಕ ವಿಧಾನಸಭಾಧ್ಯಕ್ಷ ಡಾ ಯು ಟಿ ಖಾದರ್ ಫರೀದ್ ಸಮ್ಮೇಳನ ಉದ್ಘಾಟಿಸಲಿದ್ದು, ಹಿರಿಯ ಕವಿ, ಗಾಯಕ ರಹೀಂ ಬಿ ಸಿ ರೋಡು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಶಾಸಕ ಯು ರಾಜೇಶ್ ನಾಯಕ್ ಅವರು ಉಮೈರತ್ ಕುಮೇರ್ ಅವರ ಬೈಲ್ ಮಲೆ (ಬ್ಯಾರಿ ಕಥಾ ಸಂಕಲನ) ಪುಸ್ತಕ ಬಿಡುಗಡೆ ಮಾಡುವರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ ಎಚ್ ಖಾದರ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ಎಸ್ ಮುಹಮ್ಮದ್, ತುಂಬೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ ಅಬ್ದುಲ್ ಸಲಾಂ ತುಂಬೆ, ಜನಪ್ರಿಯ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ ಅಬ್ದುಲ್ ಬಶೀರ್ ವಿ ಕೆ, ಬೆಳಗಾವಿ ವಿಟಿಯು ಸೆನೆಟ್ ಸದಸ್ಯ ಡಾ ಮುಸ್ತಪಾ ಬಸ್ತಿಕೋಡಿ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಝ್ ಎಚ್ ಐ, ಎ ಜೆ ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯೆ ಡಾ ಹಸೀನಾ ಪೆÇನ್ನೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯನ್ನು ಪತ್ರಕರ್ತ ಬಶೀರ್ ಅಡ್ಯನಡ್ಕ ನಿರೂಪಿಸಲಿದ್ದು, ತುಂಬೆ ಪದವಿಪೂರ್ವ ಕಾಲೇಜು ಉಪನ್ಯಾಸಕ ಡಿ ಬಿ ಅಬ್ದುಲ್ ರಹಿಮಾನ್, ಲೇಖಕಿ, ಕವಯತ್ರಿ ಆಯಿಷಾ ಯು ಕೆ, ಯೇನಪೆÇೀಯ ಪದವಿ ಕಾಲೇಜು ಪ್ರಾಧ್ಯಾಪಕ ಮುಹಮ್ಮದ್ ಶಾಹಿದ್ ವಳವೂರು ಚರ್ಚಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದ ಉಮ್ಮರ್ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಸಚಿವ ಬಿ ರಮಾನಾಥ ರೈ, ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಹಾಜಿ ಜಿ ಎ ಬಾವಾ, ಪೂನಾದ ಡಾ ಡಿ ವೈ ಪಾಟೀಲ್ ವಿವಿ ಕುಲಸಚಿವ ಡಾ ಬಿ ಎಂ ಬೀರಾನ್ ಮೊಹಿದಿನ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಜಿ ಎ ಉಸ್ಮಾನ್ ಕರೋಪಾಡಿ, ಹಿರಿಯ ಪತ್ರಕರ್ತ ಇಬ್ರಾಹಿಂ ಅಡ್ಕಸ್ಥಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಪುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಸಮಾರೋಪ ಬಾಷಣ ಮಾಡಲಿದ್ದಾರೆ ಎಂದರು.
ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಾದ ಡಾ ಎಂ ಎಂ ಶರೀಫ್ ಆಲಡ್ಕ (ವೈದ್ಯಕೀಯ ಕ್ಷೇತ್ರ), ಅಬ್ಬೋನು ನಂದಾವರ (ಬ್ಯಾರಿ ಜನಪದ ಕ್ಷೇತ್ರ), ಅವ್ವಮ್ಮ ಒಕ್ಕೆತ್ತೂರು (ನಾಟಿ ವೈದ್ಯಕೀಯ ಕ್ಷೇತ್ರ), ಅಬ್ದುಲ್ ಖಾದರ್ (ಮೋನುಞÂ್ಞ) ಕಲ್ಲಡ್ಕ (ಪತ್ರಿಕಾ ಕ್ಷೇತ್ರ), ಇಸ್ಮಾಯಿಲ್ ಅರಬಿ ಬಂಟ್ವಾಳ (ಸಾಮಾಜಿಕ ಕ್ಷೇತ್ರ), ಮೊಹಮ್ಮದ್ ಕೋಡಪದವು (ಪರಿಸರ ಕ್ಷೇತ್ರ) ಹಾಗೂ ಸಾಮುದಾಯಕ ಕ್ಷೇತ್ರದಲ್ಲಿ ಝುಬೈದಾ ಪರ್ಲೊಟ್ಟು ಅವರನ್ನು ಸನ್ಮಾನಿಸಲಾಗುವುದು. ಸಮ್ಮೇಳನದಲ್ಲಿ ಬ್ಯಾರಿ ಕವಿಗೋಷ್ಠಿ, ದಫ್ ಪ್ರದರ್ಶನ, ಬ್ಯಾರಿ ಹಾಡುಗಳ ಸಂಭ್ರಮ, ಮಹಿಳೆಯರಿಗೆ ಮೆಹಂದಿ ಹಾಗೂ ಬ್ಯಾರಿ ಸಾಂಪ್ರದಾಯಿಕ ತಿಂಡಿ-ತಿನಿಸು ಸ್ಪರ್ಧೆ, ತೆರು ತಪ್ಪಿರ್ ಬ್ಯಾರಿ ಪ್ರಹಸನ ಪ್ರದರ್ಶನ ನಡೆಯಲಿದೆ ಎಂದವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಅದ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸಮ್ಮೇಳನ ಸಮಿತಿ ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ, ಅಬೂಬಕರ್ ಅನಿಲಕಟ್ಟೆ, ಸಾಹಿತ್ಯ ಪರಿಷತ್ ಉಪಾಧ್ಯಕ್ಷರುಗಳಾದ ಯು ಮುಸ್ತಫಾ, ಯೂಸುಫ್ ಕರಂದಾಡಿ, ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ, ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ ಎಂ ಅಶ್ರಫ್ ಪಾಣೆಮಂಗಳೂರು ಉಪಸ್ಥಿತರಿದ್ದರು.



















0 comments:
Post a Comment