ಬಂಟ್ವಾಳ, ಮೇ 17, 2026 (ಕರಾವಳಿ ಟೈಮ್ಸ್) : ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸವಾರ ಮೃತಪಟ್ಟ ಘಟನೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಹೆದ್ದಾರಿಯಲ್ಲಿ ಮೇ 15 ರಂದು ಸಂಭವಿಸಿದೆ.
ಮೃತ ಸ್ಕೂಟರ್ ಸವಾರರನ್ನು ಪಿ ಸೋಮನಾಥ ಪ್ರಭು (65) ಎಂದು ಹೆಸರಿಸಲಾಗಿದೆ. ಇವರು ಟೋಲ್ ಗೇಟ್ ಬಳಿಯ ಹೆದ್ದಾರಿಯಲ್ಲಿ ಮೇ 15 ರಂದು ರಾತ್ರಿ 8 ಗಂಟೆ ವೇಳೆಗೆ ಮಂಗಳೂರಿನಿಂದ ಬಿ ಸಿ ರೋಡು ಕಡೆಗೆ ಬರುತ್ತಿದ್ದ ವೇಳೆ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೇ 16 ರಂದು ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment