ಪರವಾನಿಗೆ ಅವಧಿ ಮುಗಿದರೂ ದಾಖಲೆ ತಿದ್ದಿ ಅಕ್ರಮ ಗಣಿಗಾರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಪರವಾನಿಗೆ ಅವಧಿ ಮುಗಿದರೂ ದಾಖಲೆ ತಿದ್ದಿ ಅಕ್ರಮ ಗಣಿಗಾರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

16 May 2026

ಪರವಾನಿಗೆ ಅವಧಿ ಮುಗಿದರೂ ದಾಖಲೆ ತಿದ್ದಿ ಅಕ್ರಮ ಗಣಿಗಾರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಮೇ 16, 2026 (ಕರಾವಳಿ ಟೈಮ್ಸ್) : ಪರವಾನಿಗೆ ಅವಧಿ ಮುಗಿದರೂ ದಾಖಲೆ ತಿದ್ದಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ಮೇ 14 ರಂದು ನಡೆದಿದೆ. 

ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ಪರವಾನಿಗೆಯ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದಾಗಿ ವಿಟ್ಲ ಪೆÇಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ಅವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಗಣಿಗಾರಿಕೆಗೆ ಸಂಬಂಧಿಸಿದ ದಾಖಲಾತಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಪರಿಶೀಲಿಸಿದಾಗ, ಕೆಂಪು ಕಲ್ಲು ಗಣಿಗಾರಿಕೆಯ ಪರವಾನಿಗೆಯು ಎಪ್ರಿಲ್ 29 ರಂದು ಮುಕ್ತಾಯಗೊಂಡಿರುವುದು ಧೃಢಪಟ್ಟಿದೆ. ಸದ್ರಿ ಪರವಾನಿಗೆ ಪತ್ರದಲ್ಲಿ ನಮೂದಿಸಲಾಗಿದ್ದ ದಿನಾಂಕವನ್ನು ಮೇ 29 ಎಂಬುದಾಗಿ ತಿದ್ದಿರುವುದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ ಮೇರಮಜಲು ನಿವಾಸಿ ರಂಜಿತ್ ಕುಮಾರ್ ಎಂಬಾತನ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಮೇ 15 ರಂದು ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪರವಾನಿಗೆ ಅವಧಿ ಮುಗಿದರೂ ದಾಖಲೆ ತಿದ್ದಿ ಅಕ್ರಮ ಗಣಿಗಾರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top