ಬಂಟ್ವಾಳ, ಮೇ 21, 2026 (ಕರಾವಳಿ ಟೈಮ್ಸ್) : ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ಮೇ 21 ರಂದು ಬೆಳಿಗ್ಗೆ ಪಿಕಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಜಾನುವಾರು ಸಹಿತ ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ಬೆಂಗಾವಲು ಕಾರನ್ನು ಪೊಲೀಸರ ಮೇಲೆ ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದಾನೆ.
ಮೇ 21 ರಂದು ಬೆಳಿಗ್ಗೆ ಅಕ್ರಮ ಗೋಸಾಟದ ಬಗ್ಗೆ ವಿಟ್ಲ ಪೆÇಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ಅವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ಬಂಟ್ವಾಳ ಕೊಳ್ನಾಡು ಪಂಜರಕೋಡಿ ಎಂಬಲ್ಲಿಗೆ ತೆರಳಿ ಕೆಎ19 ಡಿ1496 ನೋಂದಣಿ ಸಂಖ್ಯೆಯ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿರುತ್ತಾರೆ. ಈ ವೇಳೆ ಸದ್ರಿ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕೆಎ21 ಎಂಎ0801 ನೋಂದಣಿ ಸಂಖ್ಯೆಯ ಸ್ವಿಪ್ಟ್ ಕಾರಿನಲ್ಲಿದ್ದ ಆರೋಪಿ ಬಶೀರ್ ಎಂಬಾತ ಸ್ಥಳದಲ್ಲಿದ್ದ ಪೆÇಲೀಸರ ಪ್ರಾಣಕ್ಕೆ ಅಪಾಯವಾಗುವಂತೆ ತನ್ನ ಕಾರನ್ನು ಚಲಾಯಿಸಿಕೊಂಡು ಹೋಗಿ ಪರಾರಿಯಾಗಿರುತ್ತಾನೆ. ಬಳಿಕ ಜಾನುವಾರು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕ ಕಟ್ಟಿರುವುದು ಪತ್ತೆಯಾಗಿರುತ್ತದೆ.
ಈ ಬಗ್ಗೆ ಪಿಕಪ್ ಚಾಲಕ ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಫ್ (44) ಎಂಬಾತನಲ್ಲಿ ವಿಚಾರಿಸಿದಾಗ ಯಾವುದೇ ಪರವಾನಿಗೆ ಪಡೆಯದೇ ಜಾನುವಾರುಗಳನ್ನು ವಧೆ ಮಾಡಲು ಸಾಗಿಸುತ್ತಿರುವುದಾಗಿ ತಿಳಿಸಿದ ಹಿನ್ನಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಚಾಲಕನನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ವಾಹನ, ಎರಡು ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡು, ಆರೋಪಿ ಚಾಲಕ ಮೊಹಮ್ಮದ್ ಹನೀಫ್ ಹಾಗೂ ಬಶೀರ್ ವಿರುದ್ಧ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.











0 comments:
Post a Comment