ಬಂಟ್ವಾಳ, ಮೇ 16, 2026 (ಕರಾವಳಿ ಟೈಮ್ಸ್) : ಪುದು ಗ್ರಾಮದ ಸುಜೀರು ಮಲ್ಲಿ ಎಂಬಲ್ಲಿ ನೇತ್ರಾವತಿ ನದಿಯಿಂದ ಮರಳು ಕದ್ದು ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ಮೇ 14 ರಂದು ಮಧ್ಯಾಹ್ನ ವೇಳೆ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಮಂಜುನಾಥ ಟಿ ಅವರಿಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿದಾಗ ಇಬ್ಬರು ವ್ಯಕ್ತಿಗಳು ನದಿ ದಡದಲ್ಲಿ ಪಿಕಪ್ ವಾಹನಕ್ಕೆ ಮರಳು ತುಂಬಿಸುತ್ತಿದ್ದರು. ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಮರಳು ತುಂಬಿದ್ದ ಪಿಕಪ್ ವಾಹನ ಹಾಗೂ ಮರಳು ತೆಗೆಯಲು ಬಳಸಿದ ಸಲಕರಣೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment