ಮಂಗಳೂರು, ಜೂನ್ 09, 2026 (ಕರಾವಳಿ ಟೈಮ್ಸ್) : ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕರಿಂಗಾನ ಗ್ರಾಮದ ತೌಡಿಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸೀರ್ ಅಲಿಯಾಸ್ ತನ್ಸಿ ಹಾಗೂ ಅಡ್ಯಾರ್-ಕಣ್ಣೂರು, ಕುಂಡಾಲ ಮನೆ ನಿವಾಸಿ ಅಬ್ದುಲ್ ಹಕೀಂ ಎಂಬವರ ಪುತ್ರ ಮೊಹಮ್ಮದ್ ರಾಜಿಕ್ ಎಂದು ಹೆಸರಿಸಲಾಗಿದೆ.
ಅಬ್ದುಲ್ ಖಾದರ್ ತನ್ಸೀರ್ ವಿರುದ್ಧ ಬರ್ಕೆ ಪೆÇಲೀಸ್ ಠಾಣೆ ಅಪರಾಧ ಸಂಖ್ಯೆ 18/2021 ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 143, 147, 148, 353, 332, 504 ಹಾಗೂ 149ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಇರುವುದರಿಂದ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಹೊರಡಿಸಿತ್ತು. ಅಲ್ಲದೆ, ಆತನ ವಿರುದ್ಧ ಉಳ್ಳಾಲ, ಮಂಜೇಶ್ವರ ಹಾಗೂ ಇತರ ಠಾಣೆಗಳಲ್ಲಿಯೂ ಪ್ರಕರಣಗಳು ದಾಖಲಾಗಿವೆ.
ಮೊಹಮ್ಮದ್ ರಾಜೀಕ್ ಎಂಬಾತನ ವಿರುದ್ಧ ಬರ್ಕೆ ಪೆÇಲೀಸ್ ಠಾಣೆ ಅಪರಾಧ ಸಂಖ್ಯೆ 17/2021ರಲ್ಲಿ ಕಲಂ 143, 147, 148, 353, 332, 506, 307 ಹಾಗೂ 149ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೂ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಇರುವುದರಿಂದ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಹೊರಡಿಸಿತ್ತು. ಅಲ್ಲದೆ, ಆತನ ವಿರುದ್ಧ ಉಳ್ಳಾಲ, ಬೆಳ್ತಂಗಡಿ, ಪುತ್ತೂರು ಹಾಗೂ ಕದ್ರಿ ಠಾಣೆಗಳಲ್ಲಿಯೂ ಪ್ರಕರಣಗಳು ದಾಖಲಾಗಿವೆ.
ನ್ಯಾಯಾಲಯಕ್ಕೆ ಹಾಜರಾಗದೆ, ದಸ್ತಗಿರಿಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಈ ವಿಶೇಷ ಪ್ರಕರಣಗಳ ಆರೋಪಿಗಳನ್ನು ಬರ್ಕೆ ಪೆÇಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪತ್ತೆಹಚ್ಚಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.














0 comments:
Post a Comment