ಅಕ್ರಮ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣ ಬೇಧಿಸಿದ ಅಧಿಕಾರಿಗಳು : ಮೂವರು ವಶಕ್ಕೆ - Karavali Times ಅಕ್ರಮ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣ ಬೇಧಿಸಿದ ಅಧಿಕಾರಿಗಳು : ಮೂವರು ವಶಕ್ಕೆ - Karavali Times

728x90

12 June 2026

ಅಕ್ರಮ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣ ಬೇಧಿಸಿದ ಅಧಿಕಾರಿಗಳು : ಮೂವರು ವಶಕ್ಕೆ

ಮಂಗಳೂರು, ಜೂನ್ 12, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ಬೆಳ್ತಂಗಡಿ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್ ಖಾದರ್, ಅತ್ತಾವರದ ಪ್ರಭಾಚಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಕಾರು ಮತ್ತು 42.700 ಕಿ.ಗ್ರಾಂ ತೂಕದ 2 ಆನೆ ದಂತಗಳನ್ನು  ವಶಪಡಿಸಿಕೊಳ್ಳಲಾಗಿದೆ.  

ಈ ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೆÇಲೀಸ್ ಅಧೀಕ್ಷಕ ಪವನ್ ನೆಜ್ಜೂರು ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೆÇಲೀಸ್ ಅರಣ್ಯ ಸಂಚಾರಿ ದಳದ ಪೆÇಲೀಸ್ ಉಪನಿರೀಕ್ಷಕÀ ದಿಲೀಪ್ ಜಿ.ಆರ್ ಹಾಗೂ ಸಿಬ್ಬಂದಿಗಳಾದ ಜಯರಾಮ ಕೆ.ಟಿ, ಬಾಲಕೃಷ್ಣ ಕೆ.ಎಂ, ತಾರನಾಥ ಎಸ್ ಮತ್ತು ಅಬ್ದುಲ್ ರವೂಫ್ ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣ ಬೇಧಿಸಿದ ಅಧಿಕಾರಿಗಳು : ಮೂವರು ವಶಕ್ಕೆ Rating: 5 Reviewed By: karavali Times
Scroll to Top