ಬ್ರಹ್ಮರಕೂಟ್ಲು : ಟೀ ಸ್ಟಾಲ್ ಬಳಿ ಟೀ ಕುಡಿಯುತ್ತಿದ್ದ ವ್ಯಕ್ತಿಗೆ ಅಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ - Karavali Times ಬ್ರಹ್ಮರಕೂಟ್ಲು : ಟೀ ಸ್ಟಾಲ್ ಬಳಿ ಟೀ ಕುಡಿಯುತ್ತಿದ್ದ ವ್ಯಕ್ತಿಗೆ ಅಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ - Karavali Times

728x90

30 June 2026

ಬ್ರಹ್ಮರಕೂಟ್ಲು : ಟೀ ಸ್ಟಾಲ್ ಬಳಿ ಟೀ ಕುಡಿಯುತ್ತಿದ್ದ ವ್ಯಕ್ತಿಗೆ ಅಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ

ಬಂಟ್ವಾಳ, ಜೂನ್ 30, 2026 (ಕರಾವಳಿ ಟೈಮ್ಸ್) : ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪದ ಟೀ ಸ್ಟಾಲ್ ಅಂಗಡಿ ಬಳಿ ಟೀ ಕುಡಿಯುತ್ತಿದ್ದ ವ್ಯಕ್ತಿಗೆ ಅಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಜೂನ್ 28 ರಂದು ಮಧ್ಯರಾತ್ರಿ ವೇಳೆ ಸಂಭವಿಸಿದೆ. 

ಗಾಯಗೊಂಡವರನ್ನು ವಿ ಹುಸೈನಬ್ಬ ನೌಶಾದ್ ಎಂದು ಹೆಸರಿಸಲಾಗಿದೆ. ನೌಶಾದ್ ಅವರು ತುಂಬೆ ನಿವಾಸಿ ಮೊಹಮ್ಮದ್ ಅಲಿ (52) ಎಂಬವರ ಜೊತೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾತ್ರಿ 1.25ರ ವೇಳೆಗೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪದ ಟೀ ಸ್ಟಾಲ್ ಅಂಗಡಿ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ತುಂಬೆ ಕಡೆಯಿಂದ ಬಿ ಸಿ ರೋಡು ಕಡೆಗೆ ಶೋಯೆಬ್ ಅಖ್ತರ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಡಿಕ್ಕಿಯ ರಭಸಕ್ಕೆ ನೌಶಾದ್ ಅವರ ಎಡಕಾಲಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಮೊಹಮ್ಮದ್ ಅಲಿ ಹಾಗೂ ಅಟೋ ಚಾಲಕ ಶೋಯೆಬ್ ಅಖ್ತರ್ ಅವರು ಅದೇ ರಿಕ್ಷಾದಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಮೊಹಮ್ಮದ್ ಅಲಿ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬ್ರಹ್ಮರಕೂಟ್ಲು : ಟೀ ಸ್ಟಾಲ್ ಬಳಿ ಟೀ ಕುಡಿಯುತ್ತಿದ್ದ ವ್ಯಕ್ತಿಗೆ ಅಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ Rating: 5 Reviewed By: karavali Times
Scroll to Top