ಬೆಂಗಳೂರು, ಜೂನ್ 21, 2026 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೆ ನೇಮಕಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಜೂನ್ 21 ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಮುಂದಕ್ಕೆ ಕರ್ನಾಟಕ ಕಾಂಗ್ರೆಸ್ ಹರಿಪ್ರಸಾದ್ ಮುಂದಾಳುತ್ವದಲ್ಲಿ ಮುನ್ನಡೆಯಲಿದೆ.
ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‍ನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಿದ್ದರು.
71 ವರ್ಷದ ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ನಾಯಕರಲ್ಲಿ ಒಬ್ಬರಾಗಿದ್ದಾರೆ. ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಶಾಶ್ವತ ಆಹ್ವಾನಿತ ಸದಸ್ಯರಾಗಿ ಹಾಗೂ ಹರಿಯಾಣ ರಾಜ್ಯದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.













0 comments:
Post a Comment