ರಸ್ತೆ ಡಿವೈಡರುಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ - Karavali Times ರಸ್ತೆ ಡಿವೈಡರುಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ - Karavali Times

728x90

11 June 2026

ರಸ್ತೆ ಡಿವೈಡರುಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಜೂನ್ 11, 2026 (ಕರಾವಳಿ ಟೈಮ್ಸ್) :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಚುರುಕುಗೊಂಡಿದ್ದು, ಮಳೆಗಾಲದ ಸಂದರ್ಭದಲ್ಲಿ ಗಾಳಿ ಮತ್ತು ಮಳೆಯ ಪರಿಣಾಮದಿಂದ ರಸ್ತೆಗಳಲ್ಲಿ ವಿಶೇಷವಾಗಿ ರಸ್ತೆಗಳ ಡಿವೈಡರುಗಳಿಗೆ ಅಳವಡಿಸಲಾಗಿರುವ ಪ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್ ಗಳು ಕಳಚಿ ವಾಹನಗಳ ಮೇಲೆ ಮತ್ತು ಪಾದಚಾರಿಗಳ ಮೇಲೆ ಬೀಳುವುದರಿಂದ ಅಪಘಾತಗಳು, ಜೀವಹಾನಿಗಳು ಸಂಭವಿಸುವ ಸಾಧ್ಯತೆ ಇರುತ್ತದೆ.

ಸಾರ್ವಜನಿಕರ ಸುರಕ್ಷತೆ ಮತ್ತು ಸಂಭವನೀಯ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ರಸ್ತೆಗಳಲ್ಲಿ ವಿಶೇಷವಾಗಿ ಡಿವೈಡರುಳಿಗೆ ಅಳವಡಿಸಿರುವ ಅಪಾಯಕಾರಿ/ ಅನಧಿಕೃತ ಎಲ್ಲಾ ಪ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ ಗಳನ್ನು ಮೊದಲ ಆದ್ಯತೆ ಮೇರೆಗೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಹಿತ ವರದಿಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಇನ್ನು ಮುಂದೆಯೂ ರಸ್ತೆಗಳ ಮಧ್ಯೆ ಡಿವೈಡರುಗಳಿಗೆ ಅನಧಿಕೃತ ಪ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ ಗಳನ್ನು ಅಳವಡಿಸದಂತೆ ಕ್ರಮವಹಿಸಬೇಕು.  ಅಳವಡಿಸಿದಲ್ಲಿ, ತಕ್ಷಣ ತೆರವುಗೊಳಿಸಿ ಅವರ ಮೇಲೆ ನಿಯಮಾನುಸಾರ ಕಾನೂನು ಕ್ರಮ ಜರುಗಿಸಬೇಕು. 

ಈ ಆದೇಶದ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬ ಕಂಡು ಬಂದಲ್ಲಿ, ಅಥವಾ ಅಪಘಾತ/ ಅವಘಡ ಸಂಭವಿಸಿದಲ್ಲಿ, ಸಂಬಂಧಪಟ್ಟ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿಸಿ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಹಾಗೂ £]ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ರಸ್ತೆ ಡಿವೈಡರುಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ Rating: 5 Reviewed By: karavali Times
Scroll to Top