ಬಂಟ್ವಾಳ ಪುರಸಭೆ ವತಿಯಿಂದ ಬಿ.ಸಿ.ರೋಡಿನಲ್ಲಿ ಬ್ಯಾನರ್ ತೆರವು ಕಾರ್ಯಾಚರಣೆ - Karavali Times ಬಂಟ್ವಾಳ ಪುರಸಭೆ ವತಿಯಿಂದ ಬಿ.ಸಿ.ರೋಡಿನಲ್ಲಿ ಬ್ಯಾನರ್ ತೆರವು ಕಾರ್ಯಾಚರಣೆ - Karavali Times

728x90

11 June 2026

ಬಂಟ್ವಾಳ ಪುರಸಭೆ ವತಿಯಿಂದ ಬಿ.ಸಿ.ರೋಡಿನಲ್ಲಿ ಬ್ಯಾನರ್ ತೆರವು ಕಾರ್ಯಾಚರಣೆ

ಬಂಟ್ವಾಳ, ಜೂನ್ 11, 2026 (ಕರಾವಳಿ ಟೈಮ್ಸ್) : ಮಳೆಗಾಲದಲ್ಲಿ ಅಪಾಯಕಾರಿಯಾಗಿರುವ ಜಿಲ್ಲೆಯ ವಿವಿಧೆಡೆ ರಸ್ತೆ ಅಂಚಿನಲ್ಲಿ, ಹೆದ್ದಾರಿ ಡಿವೈಡರುಗಳಲ್ಲಿ ಅಳವಡಿಸಲಾಗಿರುವ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಜೂನ್ 9 ರಂದು ಆದೇಶಿಸಿರುವ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ ಬದಿಗಳಲ್ಲಿ ಅಳವಡಿಸಲಾಗಿರುವ ಬ್ಯಾನರುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ಜೂನ 11 ರಂದು ಕೈಗೊಂಡಿದ್ದಾರೆ. 

ಬಿ ಸಿ ರೋಡು ನಗರದ ವಿವಿಧೆಡೆ ಸೇರಿದಂತೆ ಪುರಸಭಾ ವ್ಯಾಪ್ತಿಯ ಎಲ್ಲೆಂದರಲ್ಲಿ ಅಳವಡಿಸಲಾಗಿರುವ ಬ್ಯಾನರ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಗುರುವಾರ ಬೆಳಿಗ್ಗೆಯಿಂದಲೇ ಕೈಗೊಳ್ಳಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಪುರಸಭೆ ವತಿಯಿಂದ ಬಿ.ಸಿ.ರೋಡಿನಲ್ಲಿ ಬ್ಯಾನರ್ ತೆರವು ಕಾರ್ಯಾಚರಣೆ Rating: 5 Reviewed By: karavali Times
Scroll to Top