ಬಂಟ್ವಾಳ, ಜೂನ್ 06, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭಾ ಪೌರ ಕಾರ್ಮಿಕ ವಿನೋದ್ ಕುಮಾರ್ ಕುದನೆಗುಡ್ಡೆ (27) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅವಿವಾಹಿತರಾಗಿರುವ ಪುರಸಭೆಯ ಪೌರ ಕಾರ್ಮಿಕನಾಗಿದ್ದು, ಪೇಟೆ ಸ್ವಚ್ಛತೆ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ದಿನಗಳಿಂದ ಹಠಾತ್ ಅನಾರೋಗ್ಯಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿನೋದ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ಪುರಸಭಾ ನಿಕಟಪೂರ್ವ ಅಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ಪುರಸಭಾ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.











0 comments:
Post a Comment