ಮಾರ್ನಬೈಲು : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ - Karavali Times ಮಾರ್ನಬೈಲು : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ - Karavali Times

728x90

11 June 2026

ಮಾರ್ನಬೈಲು : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ

ಬಂಟ್ವಾಳ, ಜೂನ್ 11, 2026 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ  ಮಾರ್ನಬೈಲು ಎಂಬಲ್ಲಿ ಜೂನ್ 9 ರಂದು ಸಂಜೆ ಸಂಭವಿಸಿದೆ. 

ಗಾಯಗೊಂಡ ಪಾದಚಾರಿಯನ್ನು ಹರ್ಷಿತ್ ಎಂದು ಹೆಸರಿಸಲಾಗಿದೆ. ನಿಶಾಂತ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ರಸ್ತೆ ದಾಟುತ್ತಿದ್ದ ಹರ್ಷಿತ್ ಎಂಬವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ರಸ್ತೆಗೆ ಬಿದ್ದ ಹರ್ಷಿತ್ ಅವರ ತಲೆ  ಹಾಗೂ ಬಾಯಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಾರ್ನಬೈಲು : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ Rating: 5 Reviewed By: karavali Times
Scroll to Top