ನೆಹರುನಗರ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಮೃತ್ಯು - Karavali Times ನೆಹರುನಗರ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಮೃತ್ಯು - Karavali Times

728x90

13 June 2026

ನೆಹರುನಗರ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಮೃತ್ಯು

ಬಂಟ್ವಾಳ, ಜೂನ್ 13, 2026 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ನೆಹರುನಗರ ಎಂಬಲ್ಲಿ ಜೂನ್ 11 ರಂದು ರಾತ್ರಿ ಸಂಭವಿಸಿದೆ.

ಮೃತರನ್ನು ಬಿ ಮೂಡ ಗ್ರಾಮದ £ವಾಸಿ ಸೈಯದ್ ರಿಯಾಝ್ ಎಂದು ಹೆಸರಿಸಲಾಗಿದೆ. ಇವರು ನೆಹರುನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಧಾವಿಸಿ ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ £ೀಡಿದ ಬಳಿಕ ಮಂಗಳೂರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಜೂನ್ 12 ರಂದು ಬೆಳಗ್ಗಿನ ಜಾವ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮೃತರ ಸಂಬಂಧಿ ಸರೀನ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ನೆಹರುನಗರ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಮೃತ್ಯು Rating: 5 Reviewed By: karavali Times
Scroll to Top