ಮಂಗಳೂರು, ಜೂನ್ 04, 2026 (ಕರಾವಳಿ ಟೈಮ್ಸ್) : ನಗರದ ಕೆಪಿಟಿ ಜಂಕ್ಷನ್ ಬಳಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಈಶ್ವರ ನಾಗು ಮರಾಠಿ ಎಂಬ ಆರೋಪಿಯನ್ನು ಮಂಗಳೂರು ಸಿಐಡಿ ಪೆÇಲೀಸ್ ಅರಣ್ಯ ಸಂಚಾರಿ ದಳದ ಪೆÇಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯಿಂದ 3 ಕಿ ಗ್ರಾಂ ತೂಕದ ಚಿಪ್ಪು ಹಂದಿಯ ಚಿಪ್ಪು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಬೆಂಗಳೂರು ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೆÇಲೀಸ್ ಅಧೀಕ್ಷಕ ಪವನ್ ನೆಜ್ಜೂರು ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೆÇಲೀಸ್ ಅರಣ್ಯ ಸಂಚಾರಿ ದಳದ ಪೆÇಲೀಸ್ ಉಪನಿರೀಕ್ಷಕÀ ದಿಲೀಪ್ ಜಿ.ಆರ್ ಹಾಗೂ ಸಿಬ್ಬಂದಿಗಳಾದ ತಾರನಾಥ ಎಸ್ ಮತ್ತು ಅಬ್ದುಲ್ ರವೂಫ್ ಭಾಗವಹಿಸಿದ್ದರು.











0 comments:
Post a Comment