ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ - Karavali Times ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ - Karavali Times

728x90

16 June 2026

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಪ್ಪಿನಂಗಡಿ, ಜೂನ್ 16, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ 2023ರ ಮಾರ್ಚ್ 20 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ಅವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ. ಸದ್ರಿ ಪ್ರಕರಣದ ವಿಚಾರಣೆ ನಡೆಸಿದ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಮನು ಬಿ.ಕೆ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392, 216(ಎ) ಐಪಿಸಿ ಮತ್ತು 196,115 ಆರ್/ಡಬ್ಲ್ಯು 190(2) ಐಎಂವಿ ಆಕ್ಟ್ ಅಡಿಯಲ್ಲಿ ತಲಾ 10 ಸಾವಿರ ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕ ದಿವ್ಯರಾಜ ಹೆಗ್ಡೆ ಅವರು ವಾದಮಂಡಿಸಿರುತ್ತಾರೆ.

  • Blogger Comments
  • Facebook Comments

0 comments:

Post a Comment

Item Reviewed: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ Rating: 5 Reviewed By: karavali Times
Scroll to Top