ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 6ರವರೆಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ - Karavali Times ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 6ರವರೆಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ - Karavali Times

728x90

30 June 2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 6ರವರೆಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ಜೂನ್ 30, 2026 (ಕರಾವಳಿ ಟೈಮ್ಸ್) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರ ತೀವ್ರಗೊಂಡಿದ್ದು, ಮಲೆನಾಡು, ಕರಾವಳಿ ಭಾಗಗಳಲ್ಲಿ ಕಳೆದ ಎರಡು-ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಜನಜೀವನದಲ್ಲೂ ಅಸ್ತವ್ಯಸ್ಥತೆ ಉಂಟಾಗಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಿದೆ. 

ಜುಲೈ 6 ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರ, ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜುಕೈ 1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 6ರವರೆಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Rating: 5 Reviewed By: karavali Times
Scroll to Top