ಅಲ್ಪಸಂಖ್ಯಾತ ಇಲಾಖೆಯ ಪಿಯುಸಿ, ಐಟಿಐ, ಡಿಪ್ಲೊಮಾ ಕೋರ್ಸುಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ - Karavali Times ಅಲ್ಪಸಂಖ್ಯಾತ ಇಲಾಖೆಯ ಪಿಯುಸಿ, ಐಟಿಐ, ಡಿಪ್ಲೊಮಾ ಕೋರ್ಸುಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ - Karavali Times

728x90

12 June 2026

ಅಲ್ಪಸಂಖ್ಯಾತ ಇಲಾಖೆಯ ಪಿಯುಸಿ, ಐಟಿಐ, ಡಿಪ್ಲೊಮಾ ಕೋರ್ಸುಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಮಂಗಳೂರು, ಜೂನ್ 12, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ, ಡಿಪ್ಲೊಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) ಮೂಲಕ  ಆನ್ ಲೈನಿನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ ಸೈಟ್ ಮೂಲ ವೀಕ್ಷಿಸಬಹುದು ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ಇಲಾಖೆಯ ಪಿಯುಸಿ, ಐಟಿಐ, ಡಿಪ್ಲೊಮಾ ಕೋರ್ಸುಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top