ಬಂಟ್ವಾಳ, ಜೂನ್ 03, 2026 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಎಂಬಲ್ಲಿ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಬಾಳ್ತಿಲ ಗ್ರಾಮದ ನಿವಾಸಿ ಕುಮಾರಿ ಪೃಥ್ವಿ (18) ಹಾಗೂ ಸುರತ್ಕಲ್ ನಿವಾಸಿ ಕಿಶಾನ್ (22) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಗಳಿಂದ 2.50 ಲಕ್ಷ ರೂಪಾಯಿ ಮೌಲ್ಯದ 21 ಗ್ರಾಂ ಚಿನ್ನಾಭರಣ ಹಾಗೂ 600/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಪ್ರಕರಣದ ತನಿಖಾಧಿಕಾರಿ ಎಎಸ್ಸೈ ನವೀನ್, ಹೆಡ್ ಕಾನ್ಸ್ಟೇಬಲುಗಳಾದ ಸುರೇಶ್ ಕುಮಾರ್, ರಾಜೇಶ್, ರಕ್ಷಿತ್, ಪಿಸಿಗಳಾದ ಬಸವರಾಜ ಕುಡಗುಂಟಿ, ನಾಗನಾಥ, ಮಹಿಳಾ ಪಿಸಿಗಳಾದ ರೇವತಿ, ಭಾಗ್ಯಮ್ಮ, ಮಾಲಾಶ್ರೀ ಅವರುಗಳು ಪಾಲ್ಗೊಂಡಿದ್ದು, ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ್ ಹಾಗೂ ಜಿಲ್ಲಾ ಗಣಕ ಯಂತ್ರ ವಿಭಾಗದ ದಿವಾಕರ ಮತ್ತು ಸಂಪತ್ ಅವರುಗಳು ಸಹಕರಿಸಿರುತ್ತಾರೆ











0 comments:
Post a Comment