ಬೆಂಗಳೂರು, ಜೂನ್ 03, 2026 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಜೂನ್ 3 ರಂದು ಅಧಿಕೃತ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. ಅಲ್ಲದೇ ನಿರ್ಗಮಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಸ್ಮರಿಸಿದ್ದಾರೆ.












0 comments:
Post a Comment