ವಿಶೇಷ ಚೇತನರಿಗೆ ಕೃತಕ ಕಾಲು ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ - Karavali Times ವಿಶೇಷ ಚೇತನರಿಗೆ ಕೃತಕ ಕಾಲು ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ - Karavali Times

728x90

30 June 2026

ವಿಶೇಷ ಚೇತನರಿಗೆ ಕೃತಕ ಕಾಲು ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್

ಬಂಟ್ವಾಳ, ಜೂನ್ 30, 2026 (ಕರಾವಳಿ ಟೈಮ್ಸ್) : ವಿಶೇಷ ಚೇತನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ತಮ್ಮ ಬಿ ಸಿ ರೋಡು ಕಚೇರಿಯಲ್ಲಿ ಶಂಭೂರು ನಿವಾಸಿ ತನುಷ್ ಕುಲಾಲ್ ಹಾಗೂ ಗೂಡಿನಬಳಿ ನಿವಾಸಿ ಮಹಮ್ಮದ್ ಶರೀಫ್ ಅವರಿಗೆ ಕೃತಕ ಕಾಲುಗಳನ್ನು ವಿತರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ವಿಶೇಷ ಚೇತನರಿಗೆ ಅಗತ್ಯ ಸೌಲಭ್ಯಗಳು ಹಾಗೂ ಸಹಾಯೋಪಕರಣಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಕೃತಕ ಕಾಲಿನ ಮೂಲಕ ಅವರು ಹೆಚ್ಚು ಆತ್ಮವಿಶ್ವಾಸದಿಂದ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗಲಿ ಎಂಬುದು ನಮ್ಮ ಆಶಯ. ಸಮಾಜದ ಪ್ರತಿಯೊಬ್ಬರ ಬದುಕಿನಲ್ಲಿ ಆಶಾಕಿರಣ ಮೂಡಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಅಗತ್ಯವಿರುವವರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ತಲುಪುವಂತೆ £ರಂತರ ಪ್ರಯತ್ನಿಸಲಾಗುವುದು ಎಂದರು. ಕೃತಕ ಕಾಲು ಪಡೆದ ಫಲಾನುಭವಿಗಳು ಹಾಗೂ ಅವರ ಕುಟುಂಬದವರು ಈ ನೆರವಿಗಾಗಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ವಿಶೇಷ ಚೇತನರಿಗೆ ಕೃತಕ ಕಾಲು ವಿತರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ Rating: 5 Reviewed By: karavali Times
Scroll to Top