ಸಿದ್ದಕಟ್ಟೆ : ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗೂಡ್ಸ್ ಲಾರಿ ಡಿಕ್ಕಿಯಾಗಿ ಆಸ್ಪತ್ರೆಗೆ - Karavali Times ಸಿದ್ದಕಟ್ಟೆ : ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗೂಡ್ಸ್ ಲಾರಿ ಡಿಕ್ಕಿಯಾಗಿ ಆಸ್ಪತ್ರೆಗೆ - Karavali Times

728x90

6 June 2026

ಸಿದ್ದಕಟ್ಟೆ : ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗೂಡ್ಸ್ ಲಾರಿ ಡಿಕ್ಕಿಯಾಗಿ ಆಸ್ಪತ್ರೆಗೆ

ಬಂಟ್ವಾಳ, ಜೂನ್ 06, 2026 (ಕರಾವಳಿ ಟೈಮ್ಸ್) : ಹೆದ್ದಾರಿ ದಾಟುತ್ತಿದ್ದ ಪಾದಚಾರಿ ವ್ಯಕ್ತಿಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಜಂಕ್ಷನ್ ಬಳಿ ಜೂನ್ 1 ರಂದು ಸಂಭವಿಸಿದೆ. 

ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಕರಿಮಣೇಲು ನಿವಾಸಿ ವಿನಯ ಕುಲಾಲ್ ಯಾನೆ ಜಯ ಕುಲಾಲ್ ಎಂದು ಹೆಸರಿಸಲಾಗಿದೆ. ಇವರು ಮೂಡಬಿದ್ರೆ-ಬಿ ಸಿ ರೋಡು ರಾಜ್ಯ ಹೆದ್ದಾರಿನ್ನು ಸಿದ್ದಕಟ್ಟೆ ಜಂಕ್ಷನ್ ಎಂಬಲ್ಲಿ ದಾಟುತ್ತಿದ್ದ ವೇಳೆ ಮೂಡಬಿದ್ರೆ ಕಡೆಯಿಂದ ಬಿ ಸಿ ರೋಡು ಕಡೆಗೆ ಬರುತ್ತಿದ್ದ ಗುರುರಾಜ್ ಎಂಬವರು ಚಲಾಯಿಸಿಕೊಂಡು ಬಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. 

ಅಪಘಾತದಿಂದ ಜಯ ಕುಲಾಲ್ ಅವರ ತಲೆ, ಕಿವಿ, ಕೈ-ಕಾಲುಗಳಿಗೆ ಗಾಯಗಳಾಗಿದ್ದು, ಮಂಗಳೂರು ವೆನ್ ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸಿದ್ದಕಟ್ಟೆ : ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಗೂಡ್ಸ್ ಲಾರಿ ಡಿಕ್ಕಿಯಾಗಿ ಆಸ್ಪತ್ರೆಗೆ Rating: 5 Reviewed By: karavali Times
Scroll to Top