ಮಂಗಳೂರು, ಜೂನ್ 26, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದಲ್ಲಿ ಎಂಡಿಎಂಎ ಮಾರಾಟ ಮಡುತ್ತಿದ್ದ ಪ್ರಕರಣ ಬೇಧಿಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ ಘಟನೆ ಕುಳಾಯಿಗುಡ್ಡೆ ಪರಿಸರದಲ್ಲಿ ಜೂನ್ 25 ರಂದು ನಡೆದಿದೆ.
ಬಂಧಿತ ಆರೋಪಿಯನ್ನು ಮೂಲತಃ ಸುರತ್ಕಲ್ ಸಮೀಪದ ಇಡ್ಯಾ-ಕುಳಾಯಿ ಹೊಸಬೆಟ್ಟು ಈಶ್ವರ ನಗರ 3ನೇ ಅಡ್ಡ ರಸ್ತೆ ಹೊಸಮನೆ ನಿಲಯ ನಿವಾಸಿ, ಪ್ರಸ್ತುತ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿ ಇರುವ ಸದಾನಂದ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿರುವ ದಿವಂಗತ ಹನುಮಂತಪ್ಪ ಎಂಬವರ ಪುತ್ರ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು (26) ಎಂದು ಹೆಸರಿಸಲಾಗಿದೆ.
ಈತ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಜೂನ್ 25 ರಂದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 1.50 ಲಕ್ಷ ರೂಪಾಯಿ ಮೌಲ್ಯದ 15 ಗ್ರಾಂ ಎಂಡಿಎಂಎ ಸಹಿತ ಮೊಬೈಲ್ ಫೆÇೀನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,10,500/- ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಪ್ರಕರಣ, ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದು, ಈ ಮಾದಕವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.















0 comments:
Post a Comment