ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮಂಗಳೂರು ದಕ್ಷಿಣ ಠಾಣಾ ಪೊಲೀಸರ ವಶಕ್ಕೆ - Karavali Times ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮಂಗಳೂರು ದಕ್ಷಿಣ ಠಾಣಾ ಪೊಲೀಸರ ವಶಕ್ಕೆ - Karavali Times

728x90

25 June 2026

ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮಂಗಳೂರು ದಕ್ಷಿಣ ಠಾಣಾ ಪೊಲೀಸರ ವಶಕ್ಕೆ

ಮಂಗಳೂರು, ಜೂನ್ 25, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪಿಯೊಬ್ಬನನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಜೂನ್ 24 ರಂದು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಕುಂಪಲ, ಸುರಕ್ಷಾ ನಗರ ನಿವಾಸಿ ಯತೀಶ್ ಎಂಬವರ ಪುತ್ರ ಧನುಷ್ (29) ಎಂದು ಹೆಸರಿಸಲಾಗಿದೆ. ಜೂನ್ 24 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರದ ಮುಳಿಹಿತ್ಲು ಬಳಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

ಆರೋಪಿಯಿಂದ 3.32 ಗ್ರಾಂ ಎಂಡಿಎಂಎ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮಂಗಳೂರು ದಕ್ಷಿಣ ಠಾಣಾ ಪೊಲೀಸರ ವಶಕ್ಕೆ Rating: 5 Reviewed By: karavali Times
Scroll to Top