ಮೆಲ್ಕಾರ್ : ಎಂಡಿಎಂಎ ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಪೊಲೀಸರು, ಲಕ್ಷಾಂತರ ಮೌಲ್ಯದ ಮಾಲು ಸಹಿತ ಮೂವರು ಖದೀಮರು ಅಂದರ್ - Karavali Times ಮೆಲ್ಕಾರ್ : ಎಂಡಿಎಂಎ ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಪೊಲೀಸರು, ಲಕ್ಷಾಂತರ ಮೌಲ್ಯದ ಮಾಲು ಸಹಿತ ಮೂವರು ಖದೀಮರು ಅಂದರ್ - Karavali Times

728x90

5 June 2026

ಮೆಲ್ಕಾರ್ : ಎಂಡಿಎಂಎ ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಪೊಲೀಸರು, ಲಕ್ಷಾಂತರ ಮೌಲ್ಯದ ಮಾಲು ಸಹಿತ ಮೂವರು ಖದೀಮರು ಅಂದರ್

 ಬಂಟ್ವಾಳ, ಜೂನ್ 05, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ ಬೇಧಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಮೂವರು ಮಾದಕ ವಸ್ತು ಸಹಿತ ಆರೋಪಿಗಳನ್ನು ಬಂಧಿಸಿದ ಘಟನೆ ಮೆಲ್ಕಾರ್ ಬಳಿ ಜೂನ್ 4 ರಂದು ನಡೆದಿದೆ. 

ಬಂಧಿತ ಆರೋಪಿಗಳನ್ನು ಪುದು ಗ್ರಾಮದ ನಿವಾಸಿ ಎ ಜುಬೈರ್ (39), ಸಜಿಪಮುನ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸವಾದ್ (36) ಹಾಗು ಬಿ ಮೂಡ ಗ್ರಾಮದ ನಿವಾಸಿ ಬಿ ಎಂ ರಶೀದ್ ಯಾನೆ ಮಾರಿಮುತ್ತು ಎಂದು ಹೆಸರಿಸಲಾಗಿದೆ. 

ಜೂನ್ 4 ರಂದು ಸಂಜೆ, ಬಂಟ್ವಾಳ ನಗರ ಪೆÇಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈ ಓವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದು, ಸದ್ರಿ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿದ್ದರು. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ತಾವುಗಳು ಎಂಡಿಎಂಎ ಎಂಬ ಮಾದಕ ದ್ರವ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ಆರೋಪಿಗಳು ತಿಳಿಸಿದ್ದು, ಅವರನ್ನು ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ ಸುಮಾರು 7.64 ಲಕ್ಷ ರೂಪಾಯಿ ಮೌಲ್ಯದ ಒಟ್ಟು 76 ಗ್ರಾಂ 40 ಮಿಲಿ ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನ ಪತ್ತೆಯಾಗಿರುತ್ತದೆ. ಸದ್ರಿ ಸೊತ್ತುಗಳನ್ನು, ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೆÇೀನುಗಳು ಹಾಗೂ ಕೃತ್ಯಕ್ಕೆ ಬಳಸಿದ ಕೆಎ19 ಎಂಆರ್1997 ನೋಂದಣಿ ಸಂಖ್ಯೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮೆಲ್ಕಾರ್ : ಎಂಡಿಎಂಎ ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಪೊಲೀಸರು, ಲಕ್ಷಾಂತರ ಮೌಲ್ಯದ ಮಾಲು ಸಹಿತ ಮೂವರು ಖದೀಮರು ಅಂದರ್ Rating: 5 Reviewed By: karavali Times
Scroll to Top