ಮಂಗಳೂರು, ಜೂನ್ 09, 2026 (ಕರಾವಳಿ ಟೈಮ್ಸ್) : ಮಂಗಳೂರಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರತ್ಯೇಕ ಪ್ರಕರಣಗ¼ಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು ಕುಲಶೇಖರ-ಸಿಲ್ವರ್ ಗೇಟ್ ನಿವಾಸಿ ಜನನ್ ಜಗನ್ನಾಥ್ (29), ಬೋಳಾರ ನಿವಾಸಿ ಪರೀಕ್ಷಿತ್ (33) ಹಾಗೂ ಕಾರ್ ಸ್ಟ್ರೀಟ್ ನಿವಾಸಿ ಸುಶಾಂತ್ ಪೂಜಾರಿ (27) ಎಂದು ಹೆಸರಿಸಲಾಗಿದೆ.
ಬಂಧಿತರದಿಂದ 11.68 ಗ್ರಾಂ ಎಂಡಿಎಂಎ, 1,110/- ರೂಪಾಯಿ ನಗದು ಹಣ, 3 ಮೊಬೈಲ್ ಫೋನುಗಳು, 1 ತೂಕ ಮಾಪಕ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜೂನ್ 8 ರಂದು ಮಂಗಳೂರು ನಗರದ ಟಿ.ಎಚ್. ಶೆಡ್ಡೆ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದರು.
ದಾಳಿಯ ವೇಳೆ ಎಂಡಿಎಂಎ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡು, ಜನನ್ ಜಗನ್ನಾಥ್ ಮತ್ತು ಪರಿಕ್ಷಿತ್ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲು ಪೆÇಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಪ್ರತ್ತೊಂದು ಪ್ರಕರಣದಲ್ಲಿ ಜೂನ್ 6 ರಂದು ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು. ಪ್ರಕರಣದ ಮುಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಸುಶಾಂತ್ ಪೂಜಾರಿಯನ್ನು ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜೂನ್ 9 ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲು ಪೆÇಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.















0 comments:
Post a Comment