ಮಂಗಳೂರು, ಜೂನ್ 06, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೆÇಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದು, ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು 16.40 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮೊದಲ ಪ್ರಕರಣದಲ್ಲಿ ಬೆಂಗಳೂರು ನಗರದಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಜೂನ್ 5 ರಂದು ದಾಳಿ ನಡೆಸಿ ಆರೋಪಿ ಮಂಗಳೂರು ಹೊಯಿಗೆ ಬಜಾರ್ ಧೂಮಾವತಿ ದೇವಸ್ಥಾಮ ಹಿಂದುಗಡೆಯ ಜಾನಕಿ ನಿಲಯ ನಿವಾಸಿ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 10.40 ಲಕ್ಷ ರೂಪಾಯಿ ಮೌಲ್ಯದ 104 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೆÇೀನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿ ಪ್ರಣಾಮ್ ಕೋಟ್ಯಾನ್ ವಿರುದ್ಧ ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ 2016 ರಲ್ಲಿ ಹಲ್ಲೆ ಹಾಗೂ ಬೆದರಿಕೆ ಪ್ರಕರಣ, 2026 ರಲ್ಲಿ ಮಾದಕ ವಸ್ತು ಸೇವನೆ ಪ್ರಕರಣ, 2022 ರಲ್ಲಿ ಅಬಕಾರಿ ಇಲಾಖೆಯಲ್ಲಿ ಗಾಂಜಾ ಸಂಬಂಧಿತ ಪ್ರಕರಣ ಹಾಗೂ 2022 ರಲ್ಲಿ ಮಂಗಳೂರು ಉತ್ತರ ಪೆÇಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿವೆ.
2ನೇ ಪ್ರಕರಣದಲ್ಲಿ ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಜೂನ್ 5 ರಂದು ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ಅರ್ಕುಳ-ವಳಚ್ಚಿಲ್ ಪದವು ನಿವಾಸಿ, ಪ್ರಸ್ತುತ ಮಂಗಳೂರು ನಗರದ ಪದವಿನಂಗಡಿಯ ಮುಗರೋಡಿ ಗುರುನಗರ ನಿವಾಸಿ ಧನರಾಜ್ ಅಲಿಯಾಸ್ ಧನು ವಳಚ್ಚಿಲ್ (33) ಎಂದು ಹೆಸರಿಸಲಾಗಿದೆ. ಈತನಿಂದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 60 ಗ್ರಾಂ ಎಂಡಿಎಂಎ ಹಾಗೂ ಜಿಪ್-ಲಾಕ್ ಕವರ್‍ಗಳು, ಒಂದು ಮೊಬೈಲ್ ಫೆÇೀನ್ ಹಾಗೂ ಡಿಜಿಟಲ್ ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಧನರಾಜ್ ಪೂಜಾರಿ @ ಧನು ವಳಚಿಲ್ ಎಂಬಾತನ ವಿರುದ್ದ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಪೆÇಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ, ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016 ರಲ್ಲಿ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆರೋಪಿಗೆ 3 ವರ್ಷಗಳ ಶಿಕ್ಷೆಯೂ ವಿಧಿಸಲಾಗಿತ್ತು.
ಈ ಮಾದಕವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.














0 comments:
Post a Comment