ಮಂಗಳೂರು, ಜೂನ್ 23, 2026 (ಕರಾವಳಿ ಟೈಮ್ಸ್) : ಮಂಗಳೂರಿನ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ತಿಳಿದು ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾರ್ ಅವರು ತಮ್ಮ ಜೀವನವನ್ನೆಲ್ಲಾ ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಸಾವಿರಾರು ಜನರಿಗೆ ದಾರಿದೀಪರಾಗಿದ್ದರು. ಅವರ ಸರಳತೆ, ಆಳವಾದ ಜ್ಞಾನ ಹಾಗೂ ಸಮನ್ವಯದ ಮನೋಭಾವವು ಎಲ್ಲರಿಗೂ ಪ್ರೇರಣೆಯಾಗಿತ್ತು ಎಂದವರು ತಿಳಿಸಿದ್ದಾರೆ.
ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೂ ಅಪಾರ ನಷ್ಟವಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು ಎಂದು ಯು.ಟಿ. ಖಾದರ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಸರ್ವಶಕ್ತನಾದ ಅಲ್ಲಾಹು ಅವರಿಗೆ ಜನ್ನಾತುಲ್ ಫಿರ್ದೌಸ್ ನಲ್ಲಿ ಉನ್ನತ ಸ್ಥಾನ ನೀಡಲಿ ಹಾಗೂ ಅವರ ಕುಟುಂಬಸ್ಥರು, ಶಿಷ್ಯರು ಮತ್ತು ಅಭಿಮಾ£ಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಚಿವ ಯು ಟಿ ಖಾದರ್ ಅವರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ಪ್ರಾರ್ಥಿಸಿದ್ದಾರೆ.















0 comments:
Post a Comment