ಮಂಗಳೂರು, ಜೂನ್ 08, 2026 (ಕರಾವಳಿ ಟೈಮ್ಸ್) : ಡಿ ಕೆ ಶಿವಕುಮಾರ್ ನೇತೃತ್ವದ ರಾಜ್ಯದ ನೂತನ ಸರಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ ಡಾ. ಯು.ಟಿ. ಖಾದರ್ ಫರೀದ್ ಅವರನ್ನು ಜೂನ್ 7 ರಂದು ಭಾನುವಾರ ವಿಮಾನ ನಿಲ್ದಾಣದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.
ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಆಗಮಿಸಿದ ಆರೋಗ್ಯ ಸಚಿವ ಯು ಟಿ ಖಾದರ್ ಅವರು ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್, ಉಳ್ಳಾಲ ಶ್ರೀ ಭಗವತಿ ಕ್ಷೇತ್ರ, ತೊಕ್ಕೋಟು ಸಂತ ಸೆಬಾಸ್ಟಿಯನ್ ಚರ್ಚ್ ಹಾಗೀ ಶ್ರೀ ಕ್ಷೇತ್ರ ಕುದ್ರೋಳಿ ಮೊದಲಾದೆಡೆಗಳಿಗೆ ಭೇಟಿ ನೀಡಿದರು.
























0 comments:
Post a Comment