ಗಾಣದಪಡ್ಪು : ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವ ಬಂಟ್ವಾಳ ನಗರ ಪೊಲೀಸ್ ವಶಕ್ಕೆ - Karavali Times ಗಾಣದಪಡ್ಪು : ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವ ಬಂಟ್ವಾಳ ನಗರ ಪೊಲೀಸ್ ವಶಕ್ಕೆ - Karavali Times

728x90

16 June 2026

ಗಾಣದಪಡ್ಪು : ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವ ಬಂಟ್ವಾಳ ನಗರ ಪೊಲೀಸ್ ವಶಕ್ಕೆ

ಬಂಟ್ವಾಳ, ಜೂನ್ 16, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಬಿ ಮೂಡ ಗ್ರಾಮದ ಗಾಣದಪಡ್ಪು ಎಂಬಲ್ಲಿ ಜೂನ್ 15 ರಂದು ನಡೆದಿದೆ. 

ಬಂಧಿತ ಆರೋಪಿಯನ್ನು ಸುರತ್ಕಲ್ ನಿವಾಸಿ ಮೊಹಮ್ಮದ್ ಹನೀಫ್ (42) ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗಾಣದಪಡ್ಪು : ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವ ಬಂಟ್ವಾಳ ನಗರ ಪೊಲೀಸ್ ವಶಕ್ಕೆ Rating: 5 Reviewed By: karavali Times
Scroll to Top