ಬಂಟ್ವಾಳ, ಜೂನ್ 29, 2026 (ಕರಾವಳಿ ಟೈಮ್ಸ್) : ಪುದು ಗ್ರಾಮದ 10ನೇ ಮೈಲಿಕಲ್ಲು ಬಳಿ ಸುಜೀರು ಹೊಳೆಬದಿಯಲ್ಲಿ ಮಾದಕ ವಸ್ತು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಜೂನ್ 27 ರಂದು ಬಂಧಿಸಿದ್ದಾರೆ.
ಬಂಧಿತರನ್ನು ಆದಂ ರಕೀಝ್ ಹಾಗೂ ಅಬ್ದುಲ್ ರಫಾತ್ ಎಂದು ಹೆಸರಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪಿಎಸ್ಸೈ ಕಲೈಮಾರ್ ನೇತೃತ್ವದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿ ಯುವಕರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಇವರು ಮಾದಕ ವಸ್ತು ಸೇವಿಸಿರುವು ದೃಢಪಟ್ಟ ಹಿನ್ನಲೆಯಲ್ಲಿ ಅವರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















0 comments:
Post a Comment