ಜೂನ್ 21 ರ ನೀಟ್ ಪರೀಕ್ಷಾ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ - Karavali Times ಜೂನ್ 21 ರ ನೀಟ್ ಪರೀಕ್ಷಾ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ - Karavali Times

728x90

20 June 2026

ಜೂನ್ 21 ರ ನೀಟ್ ಪರೀಕ್ಷಾ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಮಂಗಳೂರು, ಜೂನ್ 20, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೆÇೀಲಿಸ್ ಕಮಿಷನರೇಟ್ ವ್ಯಾಪ್ತಿಯ 12 ಪರೀಕ್ಷಾ ಕೇಂದ್ರಗಳಲ್ಲಿ  ಜೂನ್ 21 ರಂದು 2026ನೇ ಸಾಲಿನ ನೀಟ್ (ಯುಜಿ)-2026 ರ ಪರೀಕ್ಷೆ ನಡೆಯಲಿದೆ.

ಬಲ್ಮಠ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೈಂಟ್ ಆಗ್ನೆಸ್ ಪದವಿ ಪೂರ್ವ ಕಾಲೇಜು, ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ಯುನಿವರ್ಸಿಟಿ, ಕಾರ್ ಸ್ಟ್ರೀಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೈಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜು  ಬ್ಲಾಕ್-ಎ, ಸೈಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜು ಬ್ಲಾಕ್-ಬಿ, ಸುರತ್ಕಲ್ ವಿದ್ಯದಾಯಿನಿ ಹೈಸ್ಕೂಲ್, ಎಕ್ಕೂರು ಪಿ.ಎಂ ಶ್ರೀ ಕೇಂದ್ರೀಯ  ವಿದ್ಯಾಲಯ ನಂ.2, ವಿಶ್ವವಿದ್ಯಾನಿಲಯ ಕಾಲೇಜು, ಪಣಂಬೂರು ಪಿ.ಎಂ ಶ್ರೀ ಕೇಂದ್ರೀಯ ವಿದ್ಯಾಲಯ ನಂ.1 ಹಾಗೂ ಮುಡಿಪು ಕುರ್ನಾಡು ಪಿ.ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. 

ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ಶಾಂತ ವಾತಾವರಣದಲ್ಲಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೆÇೀಲಿಸ್ ಆಯುಕ್ತ ರವಿಶಂಕರ್ ಆದೇಶಿಸಿದ್ದಾರೆ. 

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಆಸಿಡ್,  ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕಾಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು 5 ಅಥವಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ 1 ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಜೂನ್ 21 ರ ನೀಟ್ ಪರೀಕ್ಷಾ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ Rating: 5 Reviewed By: karavali Times
Scroll to Top