ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜು ಶೌಚಾಲಯ, ನೀರಿನ ಶುದ್ದೀಕರಣ ಘಟಕ ಉದ್ಘಾಟನೆ - Karavali Times ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜು ಶೌಚಾಲಯ, ನೀರಿನ ಶುದ್ದೀಕರಣ ಘಟಕ ಉದ್ಘಾಟನೆ - Karavali Times

728x90

9 June 2026

ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜು ಶೌಚಾಲಯ, ನೀರಿನ ಶುದ್ದೀಕರಣ ಘಟಕ ಉದ್ಘಾಟನೆ

ಮಂಗಳೂರು, ಜೂನ್ 09, 2026 (ಕರಾವಳಿ ಟೈಮ್ಸ್) : ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಂ ಆರ್ ಪಿ ಎಲ್ ಸಿ ಎಸ್ ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಉದ್ಘಾಟನಾ ಸಮಾರಂಭವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸ್ವಚ್ಛತೆಯ ದೃಷ್ಟಿಯಿಂದ ಇಂತಹ ಮೂಲಭೂತ ಸೌಕರ್ಯಗಳು ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ನಮ್ಮ ಮನವಿಗೆ ಸ್ಪಂದಿಸಿ ಎಂ ಆರ್ ಪಿ ಎಲ್ ನೀಡುತ್ತಿರುವ ಸಹಕಾರ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ಕೆ ಜೊತೆಯಾಗೋಣ ಎಂದು ಹೇಳಿದರು. 

ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ವಿಭಾಗದ ವ್ಯವಸ್ಥಾಪಕ ಹರೀಶ್ ರಾವ್ ಮಾತನಾಡಿ, ಸಂಸ್ಥೆಯು ಸಮುದಾಯದ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಆರೋಗ್ಯ, ಸ್ವಚ್ಛತೆ ಸುಧಾರಣೆಗೆ ಬದ್ಧವಾಗಿದೆ ಎಂದರು. 

ಕಾಲೇಜು ಪ್ರಾಂಶುಪಾಲ  ಜಯಾನಂದ ಎನ್ ಸುವರ್ಣ ಅವರು ಮಾತನಾಡಿ, ಅತ್ಯಾಧುನಿಕ ಶೌಚಾಲಯಗಳು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಿದೆ. ಎಂಆರ್‍ಪಿಎಲ್ ಸಂಸ್ಥೆಗೆ ಹಾಗೂ ಅದಕ್ಕೆ ವಿಶೇಷ ಪ್ರಯತ್ನ ಮಾಡಿದ ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ವನಿತಾ ಪ್ರಸಾದ್ ಹಾಗೂ ಶಕೀಲಾ ಕಾವಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶಾರದಾ, ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್, ಸಿಬಿಸಿ ಸದಸ್ಯ ಅಶೋಕ್ ನಾಯ್ಕ್, ಎಸ್‍ಡಿಎಂಸಿ ಅಧ್ಯಕ್ಷ ಕಿಶೋರ್, ಉದ್ಯಮಿಗಳಾದ ವಿಜಯ ಶೆಣೈ, ಪ್ರಸಾದ್, ಹಿರಿಯ ಶಿಕ್ಷಕಿ ದಾಕ್ಷಾಯಿಣಿ, ಉಪನ್ಯಾಸಕಿ ಶ್ರೀಮತಿ ಸರಳಾದೇವಿ ಮೊದಲಾದವರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಶಾಂತ್ ಕುಮಾರ್ ವಂದಿಸಿ, ಕಾಲೇಜು ಹಿರಿಯ ಉಪನ್ಯಾಸಕಿ ಶ್ರೀಮತಿ ಸರಳಾದೇವಿ ಪಿ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜು ಶೌಚಾಲಯ, ನೀರಿನ ಶುದ್ದೀಕರಣ ಘಟಕ ಉದ್ಘಾಟನೆ Rating: 5 Reviewed By: karavali Times
Scroll to Top