ಬಂಟ್ವಾಳ, ಜೂನ್ 08, 2026 (ಕರಾವಳಿ ಟೈಮ್ಸ್) : ಸಜಿಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಾವರದಲ್ಲಿ ಡೆಂಗ್ಯೂ ಜ್ವರದ ಲಕ್ಷಣಗಳು ನಿರಂತರವಾಗಿ ಕಂಡು ಬರುತ್ತಿದ್ದು, ಈ ಬಗ್ಗೆ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಸಂಪೂರ್ಣ ಗ್ರಾಮವನ್ನು ಫಾಗಿಂಗ್ ಮಾಡುವಂತೆ ಸಜಿಪಮುನ್ನೂರು ವಲಯ ಯುವ ಕಾಂಗ್ರೆಸ್ ವತಿಯಿಂದ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಹಾಗೂ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ನಂದಾವರದಲ್ಲಿ ನೀರಿನ ಮತ್ತು ಸಮರ್ಪಕ ದಾರಿದೀಪ ವ್ಯವಸ್ಥೆಯನ್ನು ಮಾಡುವಂತೆಯೂ ಪಂಚಾಯತ್ ಪಿಡಿಒ ಅವರಿಗೆ ಮನವಿ ಸಲ್ಲಿಸಲಾಗಿದೆ.
8 June 2026
- Blogger Comments
- Facebook Comments
Subscribe to:
Post Comments (Atom)














0 comments:
Post a Comment