ಬಂಟ್ವಾಳ, ಜೂನ್ 23, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ ದುರುಪಯೋಗ, ಅಕ್ರಮ ಸಾಗಣೆ ಹಾಗೂ ಅದರ ದುಷ್ಪರಿಣಾಮಗಳ ಕುರಿತು “ನಶಾ ಮುಕ್ತ ಭಾರತ” ಜನಜಾಗೃತಿ ಅಭಿಯಾನವು ಜೂ 23 ರಂದು ತುಂಬೆ ಪದವಿಪೂರ್ವ ಕಾಲೇಜಿನ ಶಬನಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾಧಿಕಾರಿ ಮಂಜುನಾಥ ಮಾತನಾಡಿ, ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಮತ್ತು ಸಮಾಜದ ಮೇಲೆ ಬೀರುವ ಗಂಭೀರ ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಯುವಜನರು ದುಶ್ಚಟಗಳಿಂದ ದೂರವಿದ್ದು ಉತ್ತಮ ಗುರಿಗಳನ್ನು ಹೊಂದಿ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಬಂಟ್ವಾಳ ಗ್ರಾಮಾಂತರ ಠಾಣೆಯ ಪರಿವೀಕ್ಷಣಾ ಅವಧಿಯ ಆರಕ್ಷಕ ಅಧಿಕಾರಿ ಶಿವರಾಮ್ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಅಕ್ರಮ ಸಾಗಣೆ, ಕಾನೂನು ಕ್ರಮಗಳು ಹಾಗೂ ಸಮಾಜದ ಸಹಭಾಗಿತ್ವದ ಅಗತ್ಯತೆಯ ಕುರಿತು ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲ ವಿ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ಕವಿತಾ ಕವಿತಾ ಸ್ವಾಗತಿಸಿ, ಶ್ರೀಮತಿ ಬೇಬಿ ವಂದಿಸಿದರು. ಅಬ್ದುಲ್ ರಹಿಮಾನ್ ಡಿ ಬಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ನಶಾ ಮುಕ್ತ ಸಮಾಜ £ರ್ಮಾಣದ ಸಂಕಲ್ಪವನ್ನು ಕೈಗೊಂಡರು.













0 comments:
Post a Comment