ನೂತನ ಸಿಎಂ ಡಿಕೆಶಿಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸಹಿತ ಹಲವು ಯೋಜನೆಗಳ ಘೋಷಣೆ - Karavali Times ನೂತನ ಸಿಎಂ ಡಿಕೆಶಿಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸಹಿತ ಹಲವು ಯೋಜನೆಗಳ ಘೋಷಣೆ - Karavali Times

728x90

3 June 2026

ನೂತನ ಸಿಎಂ ಡಿಕೆಶಿಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸಹಿತ ಹಲವು ಯೋಜನೆಗಳ ಘೋಷಣೆ

ಬೆಂಗಳೂರು, ಜೂನ್ 03, 2026 (ಕರಾವಳಿ ಟೈಮ್ಸ್) : ರಾಜ್ಯದ ನೂತನ ಸಿಎಂ ಆಗಿ ಜೂನ್ 3 ರಂದು ಸಂಜೆ ಪ್ರಮಾಣ ಸ್ವೀಕರಿಸಿದ ಡಿ ಕೆ ಶಿವಕುಮಾರ್ ಅವರು ಮೊದಲ ಸಂಪುಟ ಸಭೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಯರಂತೆಯೇ ಉಚಿತ ಬಸ್ ಸಂಚಾರ ಘೋಷಣೆ ಮಾಡಿ ಯುವ ಸಮೂಹಕ್ಕೆ ಪೂರಕ ವಾತಾವಣ ನಿರ್ಮಿಸಿದ್ದಾರೆ. 

ಬುಧವಾರ ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೂತನ ಸಿಎಂ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಇನ್ನು ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದರು.

ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ನಲ್ಲಿ ‘ಭಾರತ್ ಜೋಡೋ ಯುವಕ ಸಂಘ’ ರಚನೆ ಮಾಡುವ ಚಿಂತನೆ ಇದೆ ಎಂದ ಸಿಎಂ ರಾಜ್ಯಾದ್ಯಂತ ಒಟ್ಟು 10 ಸಾವಿರ ಯುವಕರ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದಿದ್ದಾರೆ. 

ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡಲಾಗುವುದು ಎಂದಿರುವ ಸಿಎಂ ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದಿದ್ದಾರೆ. 

ರಾಜ್ಯದಲ್ಲಿ ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂಪಾಯಿ ಘೋಷಣೆ ಮಾಡಿರುವ ಡಿಕೇಶೀ 2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್. ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಖಾಸಗಿ ಉದ್ಯೋಗ ವಿನಿಮಯ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನೂತನ ಸಿಎಂ ಡಿಕೆಶಿಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸಹಿತ ಹಲವು ಯೋಜನೆಗಳ ಘೋಷಣೆ Rating: 5 Reviewed By: karavali Times
Scroll to Top