ಮಂಗಳೂರು, ಜೂನ್ 28, 2026 (ಕರಾವಳಿ ಟೈಮ್ಸ್) : 5 ವರ್ಷದೊಳಗಿನ ಮಕ್ಕಳಿಗೆ ಪೆÇೀಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಜೂನ್ 28 ರಂದು ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮಗುವಿಗೆ ಪೆÇೀಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಭಾರತವು ಪೆÇೀಲಿಯೊ ಮುಕ್ತ ಆಗಿದ್ದರೂ, ಆರೋಗ್ಯಪೂರ್ಣ ಸಮಾಜ ನಿರ್ಮಾ ಮಾಡುವ ನಿಟ್ಟಿನಲ್ಲಿ ಲಸಿಕಾ ಕಾರ್ಯಕ್ರಮ ಮುಂದುವರಿಸುವುದು ಅಗತ್ಯವಾಗಿದೆ. ಎಲ್ಲ ಪಾಲಕರು ವಿಶೇಷ ಕಾಳಜಿ ವಹಿಸಿ ತಮ್ಮ ಮಕ್ಕಳಿಗೆ ತಪ್ಪದೇ ಪೆÇೀಲಿಯೊ ಲಸಿಕೆ ಹಾಕಬೇಕು ಎಂದರು.
ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಚ್ ಆರ್ ತಿಮ್ಮಯ್ಯ, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ ದುರ್ಗಾಪ್ರಸಾದ್, ಆಸ್ಪತ್ರೆಯ ಆರ್ ಎಂ ಒ ಡಾ ಜಗದೀಶ್, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ ರಾಜೇಶ್ ಮೊದಲಾದವರು ಭಾಗವಹಿಸಿದ್ದರು.
















0 comments:
Post a Comment