ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಎಲ್ಲರ ಸಹಕಾರಕ್ಕೆ ಮನಪಾ ಕಮಿಷನರ್ ಮನವಿ - Karavali Times ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಎಲ್ಲರ ಸಹಕಾರಕ್ಕೆ ಮನಪಾ ಕಮಿಷನರ್ ಮನವಿ - Karavali Times

728x90

22 June 2026

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಎಲ್ಲರ ಸಹಕಾರಕ್ಕೆ ಮನಪಾ ಕಮಿಷನರ್ ಮನವಿ

ಮಂಗಳೂರು, ಜೂನ್ 22, 2026 (ಕರಾವಳಿ ಟೈಮ್ಸ್) :  ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಕಾರ್ಯಕ್ರಮ ನಡೆಯಲಿದ್ದು, ಮುಂಜಾಗೃತಾ ಕ್ರಮವಾಗಿ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದರು.

ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಅಭಿಯಾನಕ್ಕೆ ಅಗತ್ಯ ಸಿದ್ಧತೆಯನ್ನು ಕೈಗೊಂಡು, 5 ವರ್ಷದೊಳಗಿನ ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ವ್ಯವಸ್ಥಿತವಾಗಿ ನಡೆಸಬೇಕು. ಕಾರ್ಮಿಕರ ಮಕ್ಕಳಿಗೂ ಲಸಿಕೆ ಲಭ್ಯವಾಗುವಂತೆ ಅಗತ್ಯ ಕ್ರಮ ವಹಿಸಬೇಕು ಎಂದರು. 

ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಪಲ್ಸ್ ಪೆÇೀಲಿಯೋ ಟ್ರಾನ್ಸಿಟ್ ಬೂತ್ ಗಳನ್ನು ತೆರೆಯಲಾಗಿದೆ ಹಾಗೂ ಜೂನ್ 29 ರಿಂದ ಜುಲೈ 1 ರವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ  ನೀಡುವ  ಲಸಿಕಾ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದವರು ಸೂಚಿಸಿದರು.

ಮನೆಯಲ್ಲಿರುವ ನವಜಾತ ಶಿಶುಗಳನ್ನು ಗುರುತಿಸಿ ಅಂತಹ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು. ತಾಯಂದಿರ ಸಭೆಗಳಲ್ಲಿ ಲಸಿಕಾ ದಿನಾಂಕದ ಕುರಿತು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸಬೇಕು ಎಂದರು. 

ಡೆಂಗ್ಯೂ, ಮಲೇರಿಯಾ ನಿಯಂತ್ರಣ ಸಭೆ

       ಡೆಂಗ್ಯೂ, ಮಲೇರಿಯಾದಂತಹ  ರೋಗ ನಿಯಂತ್ರಣಕ್ಕೆ  ಆರೋಗ್ಯ ಇಲಾಖೆ  ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ  ರೋಗ ನಿಯಂತ್ರಣದ ಬಗ್ಗೆ ಅರಿವು ಮೂಡಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದರು.

ಕಟ್ಟಡ ನಿರ್ಮಾಣ ಸ್ಥಳಗಳು ತಮ್ಮದೇ ಆದ ಲಾರ್ವಿಸೈಡ್ ಮತ್ತು ಸ್ಪ್ರೇ ಪಂಪ್ ನೊಂದಿಗೆ ವಾರಕ್ಕೊಮ್ಮೆ ಲಾರ್ವ ವಿರೋಧಿ ಕಾರ್ಯಾಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಸೊಳ್ಳೆಗಳು ನಿಂತ ನೀರಿನಲ್ಲಿ ಮೊಟ್ಟೆಯಿಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಇದರಿಂದ ಮನುಷ್ಯರಿಗೆ ರೋಗಗಳು ಬರುತ್ತವೆ. ಆದ್ದರಿಂದ ಅನಗತ್ಯ ನೀರಿನ ಸಂಗ್ರಹವನ್ನು ಕಡಿಮೆ ಮಾಡುವುದರಿಂದ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದ ಅವರು ಇತರ ಜಿಲ್ಲೆಗಳಿಂದ ಕೆಲಸಕ್ಕೆ ಬರುವ ಕಾರ್ಮಿಕರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ, ಕಟ್ಟಡ ನಿರ್ಮಾಣ ಸಂಸ್ಥೆಗಳು ಸಭೆಗಳನ್ನು ಆಯೋಜಿಸಿ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಬೇಕು. ಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಕಳುಹಿಸಬೇಕು ಎಂದವರು ಸೂಚಿಸಿದರು.

ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಡ್ರೈವ್ ಗಳನ್ನು ನಡೆಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಆರ್.ಸಿ.ಎಚ್ ಅಧಿಕಾರಿ ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಕುಲಾಲ್, ಡಾ. ಹರ್ಷಿತ್ ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಎಲ್ಲರ ಸಹಕಾರಕ್ಕೆ ಮನಪಾ ಕಮಿಷನರ್ ಮನವಿ Rating: 5 Reviewed By: karavali Times
Scroll to Top